ಕರ್ನಾಟಕ ಸರ್ಕಾರ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳನ್ನು ಗಡಿಭಾಗದಲ್ಲಿ ಮತ್ತು ಹೊರರಾಜ್ಯಗಳಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡಿರುವ ವಿದ್ಯಾರ್ಥಿಗಳಿಗೂ ವಿಸ್ತರಿಸಬೇಕು ಎಂದು ಗಡಿ ಕನ್ನಡಿಗ ರವಿಕುಮಾರ್ ಒತ್ತಾಯಿಸಿದರು. ಆಂಧ್ರಪ್ರದೇಶದ, ತೆಲಂಗಾಣ, ಕೇರಳ, ತಮಿಳುನಾಡು, ದೆಹಲಿ, ಮಹಾರಾಷ್ಟ್ರ ಇತ್ಯಾದಿ ರಾಜ್ಯದ ಗಡಿ ಭಾಗಗಳಲ್ಲಿ 1 ರಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಾರ ಉನ್ನತ ಶಿಕ್ಷಣ ಪ್ರವೇಶಾತಿಯನ್ನು ಹಾಗೂ ವಿದ್ಯಾರ್ಥಿವೇತನ ನೀಡಲು ನಿರಾಕರಿಸಲಾಗುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ಈ ಬಗ್ಗೆ ಅಗತ್ಯ ಕ್ರಮವಹಿಸಬೇಕು ಮತ್ತು ಹೊರರಾಜ್ಯಗಳಲ್ಲಿ ಶಿಕ್ಷಣ ಪಡೆಯುತ್ತಿರುವ ಕನ್ನಡದ ಸಂಶೋಧನಾ ವಿದ್ಯಾರ್ಥಿಗಳಿಗೆ ವಿಶೇಷವಾಗಿ ಸಹಾಯಧನ ನೀಡಲು ಇಲಾಖೆ ಮುಂದಾಗಬೇಕು ಎಂದು ರಾಜ್ಯ ಸರ್ಕಾರಕ್ಕೆ ಗಡಿ ಕನ್ನಡಿಗ ರವಿಕುಮಾರ್ ಕಲ್ಯಂ ವಿನಂತಿ ಮಾಡುತ್ತಾ ಹೊರನಾಡು, ಗಡಿನಾಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಲ್ಲಿನ ಸರ್ಕಾರಗಳು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಕರ್ನಾಟದಲ್ಲಿ ಅರ್ಜಿ ಸಲ್ಲಿಸಿದರೆ ಇಲ್ಲಿಯೂ ಅವರಿಗೆ ಹೊರ ರಾಜ್ಯದಲ್ಲಿ ವ್ಯಾಸಾಂಗ ಮಾಡುತ್ತಿರುವ ಕಾರಣಕ್ಕೆ ವಿದ್ಯಾರ್ಥಿವೇತನ ಸಿಗುತ್ತಿಲ್ಲ ಗಡಿ ಕನ್ನಡಿಗ ರವಿಕುಮಾರ್ ಕಲ್ಯಂ ಅಂದರು. ಗಡಿ ಭಾಗದಲ್ಲಿ ಎಸ್.ಎಸ್.ಎಲ್.ಸಿ. ಓದಿದ ಗ್ರಾಮೀಣ ಭಾಗದ ಮಕ್ಕಳಿಗೆ ಆರ್ಥಿಕ ಶೈಕ್ಷಣಿಕ ಆಗುವುದಿಲ್ಲ. ಆಗ ಅವಕಾಶದಿಂದ ವಂಚಿತರಾಗುವ ಸಾಧ್ಯಗಳಿರುವುದರಿಂದ ಕನ್ನಡದಲ್ಲೇ ಅರ್ಜಿ ತುಂಬಲು ಅವಕಾಶ ಮಾಡಿಕೊಡಬೇಕು. ಮತ್ತು ಗ್ರಾಮೀಣ ಭಾಗದ ಮತ್ತು ಕನ್ನಡಿಗರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಹೆಚ್ಚು ಉದ್ಯೋಗ ಪಡೆದುಕೊಳ್ಳಲು ಬೇಕಾಗಿರುವ ಕೌಶಲ ತರಬೇತಿಯನ್ನು ನೀಡಬೇಕಿರುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ಹೇಳಿದಹೊರನಾಡು, ಗಡಿನಾಡಿನಲ್ಲಿ ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಲ್ಲಿನ ಸರ್ಕಾರಗಳು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ಕಾರಣಕ್ಕಾಗಿ ಯಾವುದೇ ವಿದ್ಯಾರ್ಥಿ ವೇತನ ನೀಡುತ್ತಿಲ್ಲ. ಕರ್ನಾಟದಲ್ಲಿ ಅರ್ಜಿ ಸಲ್ಲಿಸಿದರೆ ಇಲ್ಲಿಯೂ ಅವರಿಗೆ ಹೊರ ರಾಜ್ಯದಲ್ಲಿ ವ್ಯಾಸಾಂಗ ಮಾಡುತ್ತಿರುವ ಕಾರಣಕ್ಕೆ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಈ ಬಗ್ಗೆ ಪ್ರಾಧಿಕಾರದ ಸೂಚನೆಯನ್ವಯ ಹಿಂದುಳಿದ ವರ್ಗಗಳ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆ ತಿರಸ್ಕರಿಸಿದ್ದು, ಮಕ್ಕಳಿಗೆ ಎರಡು ಕಡೆಯಿಂದಲೂ ಯಾವುದೇ ವಿದ್ಯಾರ್ಥಿವೇತನ ಸಿಗದೆ ಅನ್ಯಾಯವಾಗುತ್ತಿದೆ. ಹಾಗಾಗಿ ಅವರಿಗೆ ರಾಜ್ಯ ಸರ್ಕಾರದಿಂದಲೇ ವಿದ್ಯಾರ್ಥಿವೇತನ ನೀಡಲು ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸುವಂತೆ ಆಯುಕ್ತರಿಗೆ ಸೂಚಿಸಿದರು. ಅಲ್ಲದೆ ಹೊರ ರಾಜ್ಯದಲ್ಲಿ 9 ಕನ್ನಡ ಅಧ್ಯಯನ ಪೀಠಗಳಿವೆ. ಅಲ್ಲಿ ವಿದ್ಯಾಭ್ಯಾಸ ಮಾಡಲು ಕರ್ನಾಟಕದ ವಿದ್ಯಾರ್ಥಿಗಳು ಹೋಗುತ್ತಾರೆ. ಅವರಿಗೂ ವಿದ್ಯಾರ್ಥಿವೇತನ ಸಿಗುತ್ತಿಲ್ಲ. ಹೀಗಾದರೆ ಒಂದು ಕಣ್ಣಿಗೆ ಬೆಣ್ಣೆ; ಒಂದು ಕಣ್ಣಿಗೆ ಸುಣ್ಣ ಮಾಡಿದಂತಾಗುತ್ತದೆ. ಅವರು ನಮ್ಮ ಕನ್ನಡದ ಮಕ್ಕಳು ಎಂಬ ಸತ್ಯ ಅರಿತು ಅವರಿಗೆ ನಾವು ನ್ಯಾಯ ಒದಗಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಗಡಿ ಕನ್ನಡಿಗ ರವಿಕುಮಾರ್ ಕಲ್ಯಂ ಹೇಳಿದರು
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ