ಗಂಗಾವತಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿಯ ಸದಸ್ಯರಾದ ಡಾ. ಬಿ. ಜ್ಞಾನಸುಂದರ ಅವರ ನೇತೃತ್ವದಲ್ಲಿ ಇತ್ತೀಚೆಗೆ ಕುಷ್ಟಗಿ ಸರ್ಕೀಟ್ ಹೌಸ್ನಲ್ಲಿ ಹೋರಾಟಗಾರರು ಹಾಗೂ ಸಮಾಜ ಸೇವಕಿಯಾದ ಸರಸ್ವತಿ ಗಂ. ನಾಗರಾಜ ಅವರನ್ನು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಚಂದಪ್ಪ ಕುದುರಿ ಅವರನ್ನು ಹಂಗಾಮಿ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಯಿತು.
ಈ ಸಂದರ್ಭದಲ್ಲಿ ಅಧ್ಯಕ್ಷರಾಗಿ ನೇಮಕಗೊಂಡ ಬಳಿಕ ಮಾತನಾಡಿದ ಸರಸ್ವತಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ತತ್ವ ಸಿದ್ಧಾಂತಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಸಮಾಜದಲ್ಲಿನ ಅನಿಷ್ಟ ಪದ್ದತಿಗಳ, ಭ್ರಷ್ಟ ವ್ಯವಸ್ಥೆಯ ವಿರುದ್ಧ ಅತ್ಯಂತ ಪ್ರಾಮಾಣಿಕವಾಗಿ ಹೋರಾಟ ಮಾಡಿ ಶೋಷಿತ ವರ್ಗದವರ ಕಣ್ಣೀರು ಒರೆಸುವ ಕಾರ್ಯಕ್ಕೆ ಮುಂದಾಗುವೆ. ಜೊತೆಗೆ ಮಹಿಳೆಯರು ಕೇವಲ ನಾಲ್ಕು ಗೂಡೆಗಳಿಗೆ ಸೀಮಿತವಾಗದೆ ಸಮಾಜದ ಎಲ್ಲಾ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇಡಲು ಮಹಿಳಾ ಜನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವುದರ ಮೂಲಕ ಸಂಘಟನೆಯನ್ನು ಮತ್ತಷ್ಟು ಬಲಗೊಳಿಸುವುದಾಗಿ ತಿಳಿಸಿದರು. ಸಮಾಜದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಸರ್ಕಾರಿ ಅಧಿಕಾರಿಗಳೆಲ್ಲ ಹಣದ ಹಿಂದೆ ಬಿದ್ದಿದ್ದಾರೆ. ಇಂತಹ ಸಂದರ್ಭದಲ್ಲಿ ಮಹಿಳೆಯರಿಗೆ ಮತ್ತು ಶೋಷಿತ ವರ್ಗದವರಿಗೆ ನ್ಯಾಯ ಸಿಗುವುದಾದರೂ ಹೇಗೆ? ಸಮಾಜವನ್ನು ಬರಿ ಸರ್ಕಾರ ಮಾತ್ರ ತಿದ್ದಲು ಸಾಧ್ಯವಿಲ್ಲ ಜೊತೆಗೆ ಸಂಘ ಸಂಸ್ಥೆಗಳು ಸಹ ಅದರಲ್ಲಿ ಪಾತ್ರ ಬಹಳ ಪ್ರಮುಖವಾದದ್ದು, ನಾವು ಸರ್ಕಾರದ ಯಾವುದೇ ಯೋಜನೆಗಳನ್ನು ಪಡೆಯಬೇಕಾದರೆ ಹೋರಾಟದಿಂದ ಮಾತ್ರ ಸಾಧ್ಯ ಎಂದು ಈ ಸಂದರ್ಭದಲ್ಲಿ ಹೇಳಿದರು.
ಈ ಸಂದರ್ಭದಲ್ಲಿ ಬಸವರಾಜ ಸಾಸಲಮರಿ, ವಿಭಾಗೀಯ ಉಪಾಧ್ಯಕ್ಷ ರಾಮಣ್ಣ ಕಂದಾರಿ, ಜಿಲ್ಲಾಧ್ಯಕ್ಷ ನಿಂಗಪ್ಪ ಪೂಜಾರ, ನಾಗರಾಜ ಮರಿಸ್ವಾಮಿ, ಗವಿಸಿದ್ದಪ್ಪ ಸೇರಿದಂತೆ ಜಿಲ್ಲಾಧ್ಯಕ್ಷ ಗಂಗಣ್ಣ ಚಿನ್ನಮ್ಮ ಸೇರಿದಂತೆ ಜಿಲ್ಲೆ, ಎಲ್ಲಾ ತಾಲೂಕ ಅಧ್ಯಕ್ಷ, ಉಪಾಧ್ಯಕ್ಷ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.