ಚಾಮರಾಜನಗರ:ಜಿಲ್ಲೆಯ ಹನೂರು ತಾಲ್ಲೂಕಿನ ಕುರಟ್ಟಿ ಹೊಸೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದಂಟಳ್ಳಿ ಗ್ರಾಮದ ಹೃದಯ ಭಾಗದಲ್ಲಿರುವ ಕೆರೆಯಲ್ಲಿ ಕಳೆದ ಹದಿನೈದು ದಿನಗಳಿಂದಲೂ ಮೊಸಳೆ ಪ್ರತ್ಯಕ್ಷವಾಗಿ ಈ ಭಾಗದ ಜನತೆಯ ನಿದ್ದೆಗೆಡಿಸಿದೆ
ಅಲ್ಲದೆ ನೀರು ಕುಡಿಯಲು ಕೆರೆಯ ಬಳಿ ಹೋಗಿದ್ದ ನಾಯಿಯೊಂದನ್ನು ಮೊಸಳೆ ಹಿಡಿದಿತ್ತು
ಈ ಬಗ್ಗೆ ಅರಣ್ಯಾಧಿಕಾರಿಗಳ ಗಮನಕ್ಕೆ ತಂದಿದ್ದಾರೂ ಮೊಸಳೆ ಹಿಡಿಯಲು ಕ್ರಮ ಕೈಗೊಳ್ಳದೆ ಅಧಿಕಾರಿಗಳು ಕೈಚೆಲ್ಲಿ ಕುಳಿತಿದ್ದಾರೆ ಎಂದು ಇಲ್ಲಿನ ಗ್ರಾಮಸ್ಥರು ಅಳಲು ತೋಡಿಕೊಂಡಿದ್ದಾರೆ
ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಇನ್ನಾದರೂ ಇತ್ತ ಗಮನಹರಿಸಿ ಮೊಸಳೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯರ ಒತ್ತಾಯವಾಗಿದೆ.
ವರದಿ-ಉಸ್ಮಾನ್ ಖಾನ್,ಬಂಡಳ್ಳಿ.
