ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಅಥಣಿ:ಕೊಟ್ಟಲಗಿ ರಾಜ್ಯ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಪ್ರತಿಭಟನೆ

ಅಥಣಿ: ಉತ್ತಮ ರಸ್ತೆ ಹಾಗೂ ಸೂಕ್ತ ಬಸ್ಸಿನ ವ್ಯವಸ್ಥೆ ಕಲ್ಪಿಸಿ ಕೊಡುವಂತೆ ಆಗ್ರಹಿಸಿ ಕೊಟ್ಟಲಗಿ ಹಾಗೂ ರಾಮತೀರ್ಥ ಬಳಿ ನೂರಾರು ವಿದ್ಯಾರ್ಥಿಗಳು ಅಥಣಿ-ಕೊಟ್ಟಲಗಿ ರಾಜ್ಯ ಹೆದ್ದಾರಿಯ ರಾಮತೀರ್ಥ ಕ್ರಾಸ್ ಬಳಿ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಸ್ಥಳೀಯ ಪ್ರತಿನಿಧಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ರಾಮತೀರ್ಥ ಕ್ರಾಸ್ ನಿಂದ ರಾಮತೀರ್ಥ ಗ್ರಾಮಕ್ಕೆ ಬಸ್ ಬರುವುದಿಲ್ಲ, ಪ್ರಯಾಣಿಕರನ್ನು ಕ್ರಾಸಿನಲ್ಲೆ ಇಳಿಸಿ ಹೋಗುತ್ತಾರೆ, ಕೇಳಿದರೆ ರಸ್ತೆ ಸರಿಯಿಲ್ಲ ಎಂದು ಕಾರಣ ಕೊಡುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಶಾಲಾ, ಕಾಲೇಜಿಗೆ ಹೋಗುವುದು ಕಷ್ಟವಾಗಿದೆ ಎಂದು ಅಳಲು ತೋಡಿಕೊಂಡರು ಹಾಗೂ ಕಳಪೆ ಕಾಮಗಾರಿ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳಿಗೆ ಸಹಕಾರ ಮಾಡಿ ಮಾತನಾಡಿದ ಹಿರಿಯ ಕಾಂಗ್ರೆಸ್ ಮುಖಂಡ ಗಜಾನನ ಮಂಗಸೂಳಿ ಅವರು ಈ ಹದಗೆಟ್ಟ ರಸ್ತೆಯಿಂದ ಊರಿನ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಬಾಣಂತಿಯರಿಗೆ ಸಮಸ್ಯೆಯಾಗುತ್ತಿದೆ, ರಸ್ತೆ ಸರಿಪಡಿಸಬೇಕಾದ ಶಾಸಕರು ಎಲ್ಲಿದ್ದೀರಿ? ಜನತೆ ಕೂಗು ತಮಗೆ ಕೇಳಿಸುತ್ತಿಲ್ಲವೇ? ಶೀಘ್ರ ಈ ಸಮಸ್ಯೆ ನಿವಾರಿಸಿ ಇಲ್ಲವೇ ನಮ್ಮ ಪಕ್ಷದಿಂದ ಉಗ್ರ ಹೋರಾಟ ಮಾಡಲಾಗುತ್ತದೆ. ತಾಲೂಕಿನಲ್ಲಿ ಮಾಜಿ ಡಿಸಿಎಂ ಹಾಗೂ ಶಾಸಕರು ಇದ್ದರೂ ವಿದ್ಯಾರ್ಥಿಗಳ ಸಮಸ್ಯೆ ನಿವಾರಿಸಲು ಆಗುತ್ತಿಲ್ಲವೇ ಎಂದು ಗುಡುಗಿದರು.

ಈ ಪ್ರತಿಭಟನೆಯಲ್ಲಿ ಶಿವಾನಂದ ಗುಡ್ಡಾಪೂರ, ಸಿದ್ದಾರ್ಥ ಸಿಂಗೆ, ವಿಠಲ ಬಾಗೆನ್ನವರ, ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ