ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಡಾಕ್ಟರ್.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವಉದ್ಯೋಗ ವಿಚಾರಣಾ ಸಂಕೀರ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಸೀಲ್ದಾರ್ ಅನಂದಯ್ಯರವರು ಧರ್ಮಸ್ಥಳ ಸಂಸ್ಥೆಯಿಂದ ಮಹಿಳಾ ಮತ್ತು ರೈತರ ಸಬಲೀಕರಣ ಆಗುತ್ತಿರುವುದು ಸಂತಸದ ವಿಷಯ ಹಾಗೆಯೇ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯು ಮಹಿಳಾ ಸಂಘಟನೆ ಮತ್ತು ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡುವ ಮೂಲಕ ಗ್ರಾಮೀಣ ಭಾಗದ ಮಹಿಳೆ ಮತ್ತು ರೈತರ ಆರ್ಥಿಕ ಸಬಲೀಕರಣ ಮಾಡುತ್ತಿರುವುದು ಸಂತಸದ ವಿಚಾರ ಎಂದು ಹನೂರು ತಾಲೂಕು ತಹಸಿಲ್ದಾರ್ ಆನಂದಯ್ಯ ಅಭಿಪ್ರಾಯ ಪಟ್ಟರು ಒಂದು ಹಳ್ಳಿಯಿಂದ ಪ್ರಾರಂಭವಾದ ಈ ಸಂಸ್ಥೆಯು ಈಗ ರಾಜ್ಯಾದ್ಯಂತ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ ಮಹಿಳಾ ಸ್ವ ಸಹಾಯ ಸಂಘಗಳ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಸರ್ಕಾರದ ಯೋಜನೆಯ ಸೌಲಭ್ಯಗಳನ್ನು ಕೊಡಿಸುವುದು ಬ್ಯಾಂಕ್ ಸಾಲ ಸಂಘದ ಪ್ರೋತ್ಸಾಹ ಧನ ಮುಂತಾದ ಸೌಲಭ್ಯಗಳನ್ನು ನೀಡುವುದರ ಜೊತೆಗೆ ಸ್ವಯಂ ಉದ್ಯೋಗಕ್ಕೆ ಪ್ರೋತ್ಸಾಹ ನೀಡಿ ಆರ್ಥಿಕ ಸ್ವಾಲಂಬನೆಯ ಮೂಲಕ ಗ್ರಾಮೀಣ ಜನತೆಗೆ ಆತ್ಮವಿಶ್ವಾಸ ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನಿರ್ದೇಶಕಿ ಲತಾ ಬಂಗೇರ, ಚಾಮರಾಜನಗರ ಜಿಲ್ಲಾ ಜನ ಜಾಗೃತಿ ಸದಸ್ಯ ಪ್ರಕಾಶ್ ನಾಯ್ಡು,ರುಡ್ಸೆಟ್ ಸಂಸ್ಥೆಯ ಹಿರಿಯ ಉಪನ್ಯಾಸಕರಾದ ಪಾಲ್ರಾಜು,ಮಾನವ ಸಂಪನ್ಮೂಲ ತರಬೇತಿ ಸಂಸ್ಥೆಯ ವ್ಯವಸ್ಥಾಪಕ ಹರೀಶ್ ತಾಲೂಕಿನ ಯೋಜನಾಧಿಕಾರಿಗಳು ಮತ್ತು ತಾಲೂಕಿನ ವಿವಿಧ ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು ಹಾಗೂ ಪುರುಷ ಸ್ವ ಸಹಾಯ ಸಂಘದ ಸದಸ್ಯರು ಹಾಜರಿದ್ದರು.
-ಉಸ್ಮಾನ್ ಖಾನ್,ಬಂಡಳ್ಳಿ
