ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭದ್ರಾವತಿಯಲ್ಲಿ ಅದ್ದೂರಿಯಾಗಿ ಜರುಗಿದ ದಾಸ ಶ್ರೇಷ್ಠ ಕನಕದಾಸರು ಮತ್ತು ಒನಕೆ ಓಬವ್ವ ಜಯಂತಿ ಆಚರಣೆ :

ಭದ್ರಾವತಿ; ದಾಸ ಶ್ರೇಷ್ಠ ಕನಕದಾಸರು ಕೇವಲ ಒಂದು ಕುಲಕ್ಕೆ ಸೀಮಿತರಾದವರಲ್ಲ ಇಡೀ ಮಾನವಕುಲಕ್ಕೆ ಸೇರಿದವರು. . ಕನಕದಾಸರ ವಿಚಾರಧಾರೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗಬಾರದು. ನಿತ್ಯನಿರಂತರವಾದಾಗ ಮಾತ್ರ ಆವರ ಜನ್ಮದಿನಾಚರಣೆ ಸಾರ್ಥಕಗೊಳ್ಳುತ್ತದೆ. ವೀರವನಿತೆ ಒನಕೆ ಓಬವ್ವ ಅವರು ಈ ನಾಡಿಗೆ ಕೊಟ್ಟಂತಹ ಕೊಡುಗೆ ಅಪಾರವಾಗಿದೆ. ನಾಡಿನ ರಕ್ಷಣೆಯಲ್ಲಿ ತೋರಿದ ಹೋರಾಟದ ಗುಣಗಳು, ಆದರ್ಶತನಗಳು ಕರುನಾಡಿನ ನಾರಿಯರಿಗೆ ಮಾದರಿಯಾಗಿದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಅಭಿಪ್ರಾಯಪಟ್ಟರು
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲೂಕು ಕುರುಬರ ಸಮಾಜ ಮತ್ತು ಛಲವಾದಿ ಸಮಾಜದ ವತಿಯಿಂದ ತಾಲೂಕು ಪಂಚಾಯತಿ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ದಾಸ ಶ್ರೇಷ್ಠ ಕನಕದಾಸರ ಜಯಂತಿ ಹಾಗೂ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ದಾಸ ಶ್ರೇಷ್ಠರ ತತ್ವ, ಆದರ್ಶಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ದಾರ್ಶನಿಕರ ಜಯಂತಿಗೆ ಅರ್ಥ ಬರುತ್ತದೆ. ಸಮಾಜದಲ್ಲಿ ಜಾತೀಯತೆ, ಅಸೂಯೆ ಭಾವನೆಗಳು ಹೋಗಲಾಡಿಸಿ ಸಹೋದರತ್ವ ಸಹಬಾಳ್ವೆಗಳನ್ನು ಬೆಳಸಿಕೊಳ್ಳಬೇಕೆಂದು ತಿಳಿಸಿದರು.
ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ ಉಪನ್ಯಾಸ ನೀಡಿ, ಹಿಂದುಳಿದ ಶೋಷಿತ ಸಮುದಾಯದಲ್ಲಿ ಜನಿಸಿದಂತಹ ಕನಕದಾಸರು ಕೇವಲ ಕುರುಬ ಜಾತಿಗೆ ಸೀಮಿತರಾದವರಲ್ಲ. ಅವರು ಎಲ್ಲಾ ಜಾತಿಗಳಿಗೆ ಬೇಕಾದವರು. ಆ ಶತಮಾನದಲ್ಲೇ ಜಾತಿ ವ್ಯವಸ್ಥೆಯ ಬಗ್ಗೆ ಹೊರಾಡಿದ ಭಕ್ತ ಎಂದರೆ ಕನಕದಾಸರು. ಕನಕದಾಸರು ಅನೇಕ ಕೀರ್ತನೆಗಳನ್ನು ರಚಿಸಿದ್ದಾರೆ. ಜಾತಿ ಅಂಧಕಾರ, ಮೌಡ್ಯತೆಯಿಂದ ತುಂಬಿದ ಅಂದಿನ ಸಮಾಜದಲ್ಲಿ ತಮ್ಮದೇ ವಿಚಾರಧಾರೆಗಳ ಮೂಲಕ ದಾಸರಲ್ಲಿಯೇ ಅಗ್ರಗಣ್ಯ ಸ್ಥಾನದಲ್ಲಿ ಗುರುತಿಸಿಕೊಳ್ಳುವ ಜೊತೆಗೆ ಸಮಾಜ ಸುಧಾರಣೆಗಾಗಿ ಶ್ರಮಿಸಿದವರು. ಕನ್ನಡ ಭಾಷೆ, ಸಾಹಿತ್ಯಕ್ಕೆ ಅವರ ಕೊಡುಗೆ ಅಪಾರ. ಕನಕದಾಸರ ವಿಚಾರಧಾರೆಗಳು ಸರ್ವಕಾಲಿಕವಾಗಿದ್ದು, ಅವರ ವಿಚಾರಧಾರೆಗಳನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕೆಂದು ಕರೆ ನೀಡಿದರು.
ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಛಲವಾಧಿ ಸಮಾಜದ ಅಧ್ಯಕ್ಷ ಸುರೇಶ್ ಮಾತನಾಡಿದರು. ತಹಶೀಲ್ದಾರ್ ಆರ್. ಪ್ರದೀಪ್, ಗ್ರೇಡ್-2 ತಹಶೀಲ್ದಾರ್ ರಂಗಮ್ಮ, ನಗರಸಭೆ ಪೌರಾಯುಕ್ತ ಮನುಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭಾ ಸದಸ್ಯರಾದ ಶಶಿಕಲಾ ನಾರಾಯಣಪ್ಪ, ಕಾಂತರಾಜ್, ಮಂಜುಳಾ ಸುಬ್ಬಣ್ಣ, ಆರ್. ಶ್ರೇಯಸ್(ಚಿಟ್ಟೆ), ತಾಲೂಕು ಕುರುಬ ಸಮಾಜದ ನಿರ್ದೇಶಕರಾದ ಬಿ.ಎಸ್ ನಾರಾಯಣಪ್ಪ, ಹೇಮಾವತಿ, ಮಂಜುನಾಥ್(ಕೊಯ್ಲಿ), ಕೇಶವ, ಪ್ರವೀಣ್, . ವಿನೋದ್ ಕುಮಾರ್, ನಾಗರಾಜ್, ಸಣ್ಣಯ್ಯ, ಬಿ.ಎಚ್ ವಸಂತ, ಬಿ.ಎ ರಾಜೇಶ್, ಜೆ. ಕುಮಾರ್, ಛಲವಾದಿ ಸಮಾಜದ ಹಿರಿಯ ಮುಖಂಡ ಎನ್. ಶ್ರೀನಿವಾಸ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸಂಗೊಳ್ಳಿ ರಾಯಣ್ಣ ಯುವ ಪಡೆ ಅಧ್ಯಕ್ಷ ಅಭಿಲಾಷ್ ನಿರೂಪಿಸಿದರು. ಉಪತಹಸೀಲ್ದಾರ್ ಮಂಜಾನಾಯ್ಕ ಸ್ವಾಗತಿಸಿದರು. ನಗರದ ಗಾಯಕ ಸುಬ್ರಮಣ್ಯ ಅವರ ಕಂಠದಲ್ಲಿ ಕನಕದಾಸರ ಕೀರ್ತನೆಗಳ ಯೂ ಟ್ಯೂಬ್ ಬಿಡುಗಡೆಗೊಳಿಸಲಾಯಿತು. ತಾಲೂಕು ಕುರುಬರ ಸಂಘ ಹಾಗು ಕನಕ ವಿದ್ಯಾಸಂಸ್ಥೆಗೆ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರ ದಾನಿಗಳಾದ ಕೆ ಎಸ್ ಆರ್ ಟಿ ಸಿ ಮಹದೇವ್ ಹಾಗೂ ಸ್ನೇಹಿತರು ಕೊಡುಗೆಯಾಗಿ ನೀಡಿದರು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ದಾಸ ಶ್ರೇಷ್ಠ ಕನಕದಾಸರ ಮತ್ತು ವೀರವನಿತೆ ಓನಕೆ ಓಬವ್ವ ಜಯಂತೋತ್ಸವ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಭವ್ಯ ಮೆರವಣಿಗೆಗೆ ಶಾಸಕ ಸಂಗಮೇಶ್ವರ್ ಚಾಲನೆ ನೀಡಿದರು. ನಗರದ ಬಿ.ಎಚ್ ರಸ್ತೆ ಹುತ್ತಾ ಬಸ್ ನಿಲ್ದಾಣದಿಂದ ಆರಂಭಗೊಂಡ ಮೆರವಣಿಗೆ ಅಂಬೇಡ್ಕರ್‌ ವೃತ್ತ, ಹಾಲಪ್ಪ ವೃತ್ತ, ಮಾಧವಚಾರ್ ವೃತ್ತ ಮತ್ತು ರಂಗಪ್ಪ ವೃತ್ತ ಮೂಲಕ ತಾಲೂಕು ಪಂಚಾಯತ್ ಆವರಣ ತಲುಪಿತು.
ತಹಸೀಲ್ದಾರ್ ಆರ್ ಪ್ರದೀಪ್, ತಾಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ರಮೇಶ್, ನಗರಸಭೆ ಅಧ್ಯಕ್ಷ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ ಸುದೀಪ್ ಕುಮಾರ್, ಪೌರಾಯುಕ್ತ ಮನುಕುಮಾರ್ ಹಾಗು ಸದಸ್ಯರು, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಿ. ಸಿದ್ದಬಸಪ್ಪ, ತಾಲೂಕು ಕುರುಬ ಸಮಾಜ, ಸಂಗೊಳ್ಳಿ ರಾಯಣ್ಣ ಯುವ ಪಡೆ, ಕನಕ ಯುವ ಪಡೆ, ಕನಕ ಪತ್ತಿನ ಸಹಕಾರ ನಿಯಮಿತ, ಛಲವಾದಿ ಮಹಾಸಭಾ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.

ವರದಿ : ಕೆ ಆರ್ ಶಂಕರ್ ಭದ್ರಾವತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ