ಸಿರುಗುಪ್ಪ : ಪ್ರತಿಭಾ ಕಾರಂಜಿಯು ಮಕ್ಕಳಲ್ಲಿನ ಪ್ರತಿಭೆಗಳನ್ನು ಗುರುತಿಸಲು ಸಹಾಯವಾಗುತ್ತದಲ್ಲದೇ ಗ್ರಾಮೀಣ ಸೊಗಡಿನ ಜಾನಪದ, ಸಂಸ್ಕೃತಿಯ ಉತ್ತೇಜನವಾಗುತ್ತದೆಂದು ಶಾಸಕ ಎಂ.ಎಸ್.ಸೋಮಲಿ0ಗಪ್ಪ ತಿಳಿಸಿದರು.
ನಗರದ ವಿಶ್ವಜ್ಯೋತಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಛೇರಿಗಳ ಸಂಯುಕ್ತಾಶ್ರಯದಲ್ಲಿ ನಡೆದ 2022-23ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಸಸಿಗೆ ನೀರೆರೆಯುವ ಮೂಲಕ ಉದ್ಘಾಟಿಸಿದರು.
ಪಿ.ಡಿ ಭಜಂತ್ರಿ ಕ್ಷೇತ್ರ ಶಿಕ್ಷಣಾಧಿಕಾರಿ ಮಾತನಾಡಿ ಅವರು ಎಲ್ಲಾ ಶಾಲೆಯ ಮಕ್ಕಳು ಭಾಗವಹಿಸುವುದರಿಂದ ಮಕ್ಕಳಲ್ಲಿ ವಿನೂತನ ಮಾದರಿಗಳ ತಯಾರಿಕೆ, ಹಿಂದಿನ ಕಾಲದ ವೇಷ ಭೂಷಣ, ಪುರಾಣ ಪ್ರವಚನ, ಯಕ್ಷಗಾನದಂತಹ ಧಾರ್ಮಿಕ ಸಂಸ್ಕೃತಿಗಳ ಜಾಗೃತಿ ಮೂಡುತ್ತದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿವಿಧ ಧಾರ್ಮಿಕತೆಯ ಭಕ್ತಿ ಗೀತೆಗಳು ಮಂತ್ರಗಳ ಪಠಣ,
ಸಾಮೂಹಿಕ ನೃತ್ಯ ಸೇರಿದಂತೆ ಅನೇಕ ಕಾರ್ಯಕ್ರಮಗಳು ಜರುಗಿದವು.
ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ವಿಶ್ವಜ್ಯೋತಿ ಶಾಲೆಯ ಆಡಳಿತ ಮಂಡಳಿಯಿ0ದ ಊಟದ ವ್ಯವಸ್ಥೆ ಮಾಡಲಾಗಿತ್ತು.
ಇದೇ ವೇಳೆ ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ, ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಮಡಗಿನ ಬಸಪ್ಪ,
ಶಾಲೆಯ ನಿರ್ದೇಶಕ ವಿವೇಕ್ ಆನಂದ್
ಸೇರಿದಂತೆ ಶಿಕ್ಷಣ ಇಲಾಖೆಯ ಸಿಬ್ಬಂದಿಗಳು ವಿವಿಧ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಇದ್ದರು.