ಹನೂರು:ಬೆಂಗಳೂರು ಸಮೀಪದ ಬಿಡದಿಯಲ್ಲಿನ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರ ತೋಟದ ನಿವಾಸದಲ್ಲಿ ಜೆಡಿಎಸ್ ಉಪಾಧ್ಯಕ್ಷರು ಹಾಗೂ ಚಾಮರಾಜನಗರ ಜಿಲ್ಲಾಧ್ಯಕ್ಷ ಎಂ ಆರ್ ಮಂಜುನಾಥ್ ಸಮ್ಮುಖದಲ್ಲಿ ಕಾಂಗ್ರೆಸ್ ನ ಹಿರಿಯ ಮುಖಂಡ ಚಾಮುಲ್ ಮಾಜಿ ಅಧ್ಯಕ್ಷ ಗುರುಮಲ್ಲಪ್ಪ ಮತ್ತು ಅವರ ಪುತ್ರ ಹಾಗೂ ಗ್ರಾಮ ಪಂಚಾಯಿತಿಯ ಸದಸ್ಯ ಸ್ವಾಮಿ ತಮ್ಮ ಅಪಾರ ಬೆಂಬಲಿಗರೊಂದಿಗೆ ಜೆಡಿಎಸ್ ಸೇರಿದರು.
ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿ ಮಾತನಾಡಿ ಗುರುಮಲ್ಲಪ್ಪ ಅವರು ಹಿರಿಯ ವ್ಯಕ್ತಿ ಪಕ್ಷಕ್ಕೆ ಸೇರ್ಪಡೆಯಾಗಿರುವುದು ತುಂಬಾ ಸಂತೋಷದ ವಿಚಾರವಾಗಿದೆ.ಪಕ್ಷದ ಸಂಘಟನೆಗೆ ಹೆಚ್ಚು ಒತ್ತು ನೀಡಿ ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ ಎಂ ಆರ್ ಮಂಜುನಾಥ್ ಅವರನ್ನು ಗೆಲ್ಲಿಸಲು ಸಹಕಾರ ನೀಡುವಂತೆ ತಿಳಿಸಿದರು.ಈ ವೇಳೆ ಮನ್ ಎಂ ಆರ್ ಮಂಜುನಾಥ್ ಮಾತನಾಡಿ ನಮ್ಮ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಲೆ ಮಹದೇಶ್ವರ ವನ್ಯಜೀವಿ ವಲಯವನ್ನು ಹುಲಿ ಸಂರಕ್ಷಣಾ ಪ್ರದೇಶ ಎಂದು ಘೋಷಣೆ ಮಾಡಲು ಸರಕಾರ ಅಗತ್ಯ ಸಿದ್ಧತೆಯನ್ನು ಕೈಗೊಂಡಿದೆ.ಇದರಿಂದ ಕಾಡಂಚಿನ ಗ್ರಾಮಗಳು ಹಾಗೂ ಮಲೆಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತರ ಮಂದಿ ಕಾಲ್ನಡೆಗೆಯಲ್ಲಿ ಬರುವರು ಇವರಿಗೂ ಕೂಡ ತೊಂದರೆ ಉಂಟಾಗುತ್ತದೆ. ಇದಕ್ಕೆ ಸಂಬಂಧಪಟ್ಟ ಸಾಧಕ ಬಾಧಕವನ್ನು ಸಿಎಂ ಜತೆ ಚರ್ಚೆ ಮಾಡಿ ತಿಳಿಸುವಂತೆ ಮನವಿ ಮಾಡಿದರು.
ಈ ವಿಷಯಕ್ಕೆ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಚರ್ಚಿಸುವುದಾಗಿ ಭರವಸೆಯನ್ನು ನೀಡಿದರು.ವರದಿ ಉಸ್ಮಾನ್ ಖಾನ್.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.