ವಿಜಯನಗರ ಜಿಲ್ಲೆ ಕೊಟ್ಟೂರು ;
ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜು, ಕೊಟ್ಟೂರು ಇವರ ಸಂಯಕ್ತ ಆಶ್ರಯದಲ್ಲಿ ನಡೆಯುವ 2022-23ನೇ ಸಾಲಿನ ವಿಜಯನಗರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮವನ್ನು ದಿನಾಂಕ 17-11-2022ರಂದು ಕೊಟ್ಟೂರಿನ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ವಿದ್ಯಾರ್ಥಿಗಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಹೊರತರಲು ಪದವಿ ಪೂರ್ವ ಶಿಕ್ಷಣ ಇಲಾಖೆ ರೂಪಿಸಿಕೊಂಡ ಅತ್ಯಂತ ಯಶಸ್ವಿ ಕಾರ್ಯಕ್ರಮ ಇದಾಗಿದ್ದು, ಪದವಿ ಪೂರ್ವ ಶಿಕ್ಷಣದ ಪ್ರಥಮ ಮತ್ತು ದ್ವಿತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಸಾಂಸ್ಕೃತಿಕ ಚಟುವಟಿಕೆಗಳನ್ನು 11 ವಿಭಾಗಗಳಲ್ಲಿ ನಡೆಸಲಾಗುತ್ತದೆ. ವಿದ್ಯಾರ್ಥಿಗಳು ಈ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಇದರ ಸದುಪಯೋಗ ಮಾಡಿಕೊಳ್ಳಬೇಕೆಂದು ಇಂದು ಸಂಸ್ಥೆಯ ಖಜಾಂಚಿಗಳಾದ ಶ್ರೀ ಎಂ.ಟಿ. ಚಂದ್ರಪ್ಪ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾನ್ಯ ಶ್ರೀ ಸುಗೇಂದ್ರ ಹೆಚ್, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಳ್ಳಾರಿ ಇವರು ನೆರವೆರಿಸುತ್ತಿದ್ದು, ಅಧ್ಯಕ್ಷತೆಯನ್ನು ಶ್ರೀ ಚಂದ್ರಪ್ಪ ಎಂ.ಟಿ., ಖಜಾಂಚಿಗಳು, ಇಂದಿರಾ ಎಜ್ಯುಕೇಷನ್ ಟ್ರಸ್ಟ್, ಕೊಟ್ಟೂರು ವಹಿಸಿಕೊಳ್ಳಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾನ್ಯ ಶ್ರೀ ನಾಗರಾಜ ಹವಲ್ದಾರ್. ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜ್, ಹೊಸಪೇಟೆ, ಮಾನ್ಯ ಶ್ರೀ ಧರ್ಮಾಯತ್. ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜ್, ಮರಿಯಮ್ಮನಹಳ್ಳಿ. ಮಾನ್ಯ ಶ್ರೀ ಸಿದ್ರಾಮ. ಪ್ರಾಂಶುಪಾಲರು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜ್, ಹೊಸಪೇಟೆ.
ಮಾನ್ಯ ಶ್ರೀ ಡಾ. ಸೋಮಶೇಖರ್ ಜಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜ್, ಕೊಟ್ಟೂರು ಮತ್ತು ಮಾನ್ಯ ಶ್ರೀ ತಿಪ್ಪೇಸ್ವಾಮಿ ಬಿ.ಪಿ., ಪ್ರಾಂಶುಪಾಲರು, ಶ್ರೀ.ಉ.ಜ.ಸಂ.ಪ.ಪೂ. ಕಾಲೇಜ್, ಉಜ್ಜಿನಿ ಇವರು ಭಾಗವಹಿಸಲಿದ್ದಾರೆ