ಭದ್ರಾವತಿ: ನಗರಸಭೆ ವ್ಯಾಪ್ತಿಯ ಅಪ್ಪರ್ ಹುತ್ತಾ ನಿವಾಸಿ, ಶ್ರೀ ನಂದಿ ಈಶ್ವರ ದೇವಸ್ಥಾನ ಸಮಿತಿ ಸಂಸ್ಥಾಪಕ ಟ್ರಸ್ಟಿ ಎಸ್.ಕೆ ಬಸವರಾಜ್(66) ನಿಧನ ಹೊಂದಿದರು.
ಮೃತರು ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಸಂಸ್ಕಾರ ಬುಧವಾರ ಹುತ್ತಾ ಹಿಂದೂ ರುದ್ರಭೂಮಿಯಲ್ಲಿ ನೆರವೇರಿತು.
ಮೂಲತಃ ಮಂಡ್ಯ ಜಿಲ್ಲೆ ಶ್ಯಾನ್‌ಬೋಗನ ಹಳ್ಳಿಯವರಾದ ಬಸವರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.
ಎಸ್ ಕೆ ಬಸವರಾಜ್ ರವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶ್ರೀ ನಂದಿ ಈಶ್ವರ ದೇವಸ್ಥಾನ ಸಮಿತಿಯ ಪ್ರಮುಖರು, ವೀರಶೈವ ಮುಖಂಡರಾದ ಸಿದ್ದಲಿಂಗಯ್ಯ ಸೇರಿದಂತೆ ಸ್ಥಳೀಯ ಅನೇಕ ಮುಖಂಡರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. .
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.