ವಿಜಯನಗರ ಜಿಲ್ಲೆ ;ಕೊಟ್ಟೂರು
ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಹಾಗೂ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜು, ಕೊಟ್ಟೂರು ಇವರ ಸಂಯಕ್ತ ಆಶ್ರಯದಲ್ಲಿ ದಿನಾಂಕ 17-11-2022ರಂದು ನಡೆದ 2022-23ನೇ ಸಾಲಿನ ವಿಜಯನಗರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಚಟುವಟಿಕೆಗಳ “ಸಾಂಸ್ಕೃತಿಕ ಸೌರಭ” ಕಾರ್ಯಕ್ರಮವನ್ನು ಕೊಟ್ಟೂರಿನ ಇಂದು ಇನೋವೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಲಾಯಿತು.
ವಿಜಯನಗರ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪ್ರಾಚಾರ್ಯ ಶ್ರೀ ನಾಗರಾಜ ಹವಲ್ದಾರ್ ಇವರು ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿರುವ ಸಾಂಸ್ಕೃತಿಕ ಚಟುವಟಿಕೆ ಕಾರ್ಯಕ್ರಮವನ್ನು ವಿದ್ಯಾರ್ಥಿಗಳು ಭಾಗವಹಿಸಿ ತಮ್ಮಲ್ಲಿ ಅಡಗಿರುವ ಪ್ರತಿಭೆಗಳನ್ನು ಅನಾವರಣಗೊಳಿಸಬೇಕೆಂದು ಹಾಗೂ ವಿದ್ಯಾರ್ಥಿಗಳ ಸರ್ವತ್ತೋಮುಖ ಅಭಿವೃದ್ಧಿ ಆಗಬೇಕೆಂದರೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಬೇಕೆಂದು ತಿಳಿಸಿದರು.
ಈ ಕಾರ್ಯಕ್ರಮದ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಮಾನ್ಯ ಶ್ರೀ ಸುಗೇಂದ್ರ ಹೆಚ್, ಉಪನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಳ್ಳಾರಿ ಇವರು ವಹಿಸಿಕೊಂಡಿದ್ದು, ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜೇತರಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು.
ಈ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಾದ ಸಿರಿ ಮತ್ತು ಸಂಗಡಿಗರು ಪ್ರಾರ್ಥಿಸಿದರು, ಉಪನ್ಯಾಸಕ ಮಹೇಶ ಹೆಚ್ ನಿರೂಪಿಸಿದರು, ನಾಗರಾಜ ಸಿ ಸ್ವಾಗತಿಸಿದರು, ವೀರೇಶ್ ಹೆಚ್.ಎಂ. ವಂದಿಸಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.