ಯಾದಗಿರಿ:ನ.24 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ಹಾಗೂ “ಮಹಿಳಾ ದಿನ”ಪ್ರಯುಕ್ತ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಮಗ್ರ ಸಬಲೀಕರಣ ಕುರಿತು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಯಾದಗಿರಿ ಇವರ ಸಂಯುಕ್ತ ಆಶ್ರಯದಲ್ಲಿ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ಹಾಗೂ “ಮಹಿಳಾ ದಿನ” ಪ್ರಯುಕ್ತ ಮಹಿಳೆಯರ ಸುರಕ್ಷತೆ, ಭದ್ರತೆ ಮತ್ತು ಸಮಗ್ರ ಸಬಲೀಕರಣ ಕುರಿತು ಅರಿವು ಕಾರ್ಯಕ್ರಮ ಮಾಡಲಾಯಿತು ಈ ಕಾರ್ಯಕ್ರಮದ ಗೌರವಾನ್ವಿತ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಾಹೀಲ್ ಅಹ್ಮದ್ ಎಸ್.ಕುನ್ನಿಭಾವಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹೆಣ್ಣು ಮಕ್ಕಳ ರಕ್ಷಣೆಯ ನಮ್ಮೆಲ್ಲರ ಹೊಣೆ,ಹೆಣ್ಣು ಮಕ್ಕಳು ಸಂವಿಧಾನಿಕವಾಗಿ ಜಾರಿಯಲ್ಲಿರುವ ಹಕ್ಕು ಮತ್ತು ಕಾನೂನುಗಳ ಸದುಪಯೋಗ ಪಡಿಸಿಕೊಂಡಾಗ ಮಾತ್ರ ಸಮಗ್ರ ಸಬಲೀಕರಣ ಆಗಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಉಪನಿರ್ದೇಶಕರು ಶ್ರೀ ಪ್ರಭಾಕರ್ ಇವರು ಕಾರ್ಯಕ್ರಮ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದೇಶದ್ಯಾಂತ ಇದೇ ನ.19. ರಿಂದ ಡಿ.25ರ ವರೆಗೆ ಹಮ್ಮಿಕೊಳ್ಳುಲಾಗಿರುವ “ರಾಷ್ಟ್ರೀಯ ಐಕ್ಯತಾ ಸಪ್ತಾಹ” ಕಾರ್ಯಕ್ರಮದ ವಿವರ ಹಾಗೂ “ಮಹಿಳಾ ದಿನ”ದ ಆಚರಣೆಯ ಪ್ರಾಮುಖ್ಯತೆ ಕುರಿತು ವಿವರಿಸಿದರು.ಹೆಣ್ಣು ಮಕ್ಕಳು ತಮಗೆ ಯಾವುದೇ ಸಮಸ್ಯೆ ಬಂದರೂ 112ಗೆ ಕರೆ ಮಾಡಲು ಮತ್ತು ಈಗಾಗಲೇ ನಮ್ಮ ಜಿಲ್ಲೆಯಲ್ಲಿ ಮಾನ್ಯ ಜಿಲ್ಲಾಧಿಕಾರಿಗಳ ಆದೇಶದನ್ವಯ “ಜಿಲ್ಲಾ ಮಟ್ಟದ ಸ್ಥಳಿಯ ದೂರು ಸಮಿತಿ”ಯನ್ನು ರಚನೆ ಮಾಡಲಾಗಿದ್ದು ಈ ಸಮಿತಿಯ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಈ ಕಾರ್ಯಕ್ರಮದಲ್ಲಿ ಯಾದಗಿರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ನಿರೂಪಣಾಧಿಕಾರಿಗಳು ಶ್ರೀ ಪ್ರೇಮಮೂರ್ತಿ ಅವರು ಪ್ರಾಸ್ತಾವಿಕ ಭಾಷಣೆ ಮಾಡಿದರು.
ಈ ಸಂದರ್ಭದಲ್ಲಿ ಯಾದಗಿರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲಾಲ್ ಸಾಬ್ ಪಿರಾಪೂರ, ಯಾದಗಿರಿ ನ್ಯಾಯವಾದಿಗಳು ಶ್ರೀಮತಿ ನಿರ್ಮಲ ಎಸ್.ಹೂಗಾರ್,ಕಾನೂನು ಸಲಹೆಗಾರರು ಶ್ರೀಮತಿ ಲತಾ ಸಖಿ ಕೇಂದ್ರ ಹಾಗೂ ಎಲ್ಲಾ ಮೇಲ್ವಿಚಾರಕಿಯರು ಅಂಗನವಾಡಿ ಕಾರ್ಯಕರ್ತೆಯರು ಸ್ತ್ರೀ ಶಕ್ತಿ ಸಂಘದ ಸದಸ್ಯರು, ಜಿಲ್ಲಾ ಸಂಯೋಜಕರು ಯಲ್ಲಪ್ಪ ಕುಂಚಾವರಂ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗೆ ಕಾರ್ಯಕ್ರಮಕ್ಕೆ ನಿರೂಪಣೆ ಮಾಡಿದರು ಹಿರಿಯ ಮೇಲ್ವಿಚಾರಕಿ ಶ್ರೀಮತಿ ಉಷಾ ಅವರು ಸ್ವಾಗತ ಕೋರಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.