ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಕಾರ್ಯಕ್ರಮದ ಅಂಗವಾಗಿ ಇಂದು ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಇಂಡಿ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ವಿವಿಧ ಸಾರ್ವಜನಿಕರು ದಾರಿ ಸಮಸ್ಯೆ ಕುರಿತು 9 ಅರ್ಜಿಗಳನ್ನು ಸಲ್ಲಿಸಿದ್ದು, ಅರ್ಜಿಗಳ ವಿಲೇವಾರಿಗೆ ಕ್ರಮ ಕೈಗೊಳ್ಳಲು ಸೂಚಿಸಿದ ಜಿಲ್ಲಾಧಿಕಾರಿಗಳು, ಇಂಡಿ ಸರ್ಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ವ್ಯವಸ್ಥೆ, ಭೂಯ್ಯಾರ ನದಿ ಹಿನ್ನೀರಿನಿಂದ ಹಾಳಾದ ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಬೇಕು. ಮಿನಿ ವಿಧಾನಸೌಧ ಪಕ್ಕದ ರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಸತಿ ಗೃಹ ಕಂಪೌಂಡ್ ಪರಿಶೀಲನೆ ನಡೆಸಿ, ರಸ್ತೆ ಅಗಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು.ಜನರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು.ಆರೋಗ್ಯ ಕೇಂದ್ರದಲ್ಲಿ ಆದ್ಯತೆಯ ಮೇರೆಗೆ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಇಂಡಿ ಉಪವಿಭಾಗಾಧಿಕಾರಿ ರಾಮಚಂದ್ರ ಗಡಾದೆ, ತಹಶೀಲ್ದಾರ ನಾಗಯ್ಯ ಹಿರೇಮಠ, ಟಿಎಚ್ಓ ಡಾ. ಅರ್ಚನಾ ಕುಲಕರ್ಣಿ ಸೇರಿದಂತೆ ವಿವಿಧ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ.ಅರವಿಂದ್ ಕಾಂಬಳೆ