ಪಾವಗಡ:- ನವಂಬರ್ 30 ಬುಧವಾರದಂದು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಬಿಜೆಪಿ ಪಕ್ಷದ ರಾಜಾಹುಲಿಯಾದ ಬಿ.ಎಸ್.ಯಡಿಯೂರಪ್ಪ ಅವರನ್ನು ಪಾವಗಡ ತಾಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ಖಜಾಂಚಿಗಳಾದ ಶ್ರೀಮತಿ ದೀಪು ರಾಘವೇಂದ್ರ ಅವರು ಅವರ ಅಭಿಮಾನಿಗಳೊಂದಿಗೆ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಪಾವಗಡ ವಿಧಾನಸಭಾ ಕ್ಷೇತ್ರದ 2023ರಲ್ಲಿ ನಡೆಯುವ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ತನಗೆ ಟಿಕೆಟ್ ಕೊಡಿಸಿ ಎಂದು ರಾಜಾಹುಲಿ ಬಳಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ
ಇನ್ನು ದೀಪು ರಾಘವೇಂದ್ರ ಅವರು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ನ ಮೂಲಕ ಕೋವಿಡ್ ಸಂಕಷ್ಟ ಸಮಯದಲ್ಲಿ ಅನೇಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು,ಬೆಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಪಾವಗಡದವರು ಅಪಘಾತವಾದ ಗಾಯಾಳುಗಳಿಗೆ ಮತ್ತು ವಿವಿಧ ರೋಗಗಳಿಗೆ ತುತ್ತಾಗಿ ಶಸ್ತ್ರ ಚಿಕಿತ್ಸೆ ಮಾಡಿಸಲು ಆರ್ಥಿಕ ಸಹಾಯ ನೀಡಿರುವ ವಿಷಯ ಮುನ್ನೆಲೆಗೆ ಬಂದಿದೆ.
ಇದಲ್ಲದೆ ಟ್ರಸ್ಟ್ ವತಿಯಿಂದ ಪಾವಗಡ ತಾಲೂಕಿನಾದ್ಯಂತ ಹಲವು ಸಾಮಾಜಿಕ ಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದ್ದಾರೆ.
ಇತ್ತೀಚಿಗೆ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ತಿರುಮಣಿ ಗ್ರಾಮದಲ್ಲಿ ಅದ್ದೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಕಾರ್ಯಕ್ರಮದಲ್ಲಿ ತಾನು ರಾಜಕೀಯಕ್ಕೆ ಬರುವುದಾಗಿ ಘೋಷಿಸಿ ಜನರ ಆಶೀರ್ವಾದವನ್ನು ಬೇಡಿದ್ದರು. ಒಟ್ಟಿನಲ್ಲಿ ಏನೇ ಆಗಲಿ ಈಗ ಬಿಜೆಪಿ ಪಕ್ಷದಲ್ಲಿ ಪಾವಗಡ ತಾಲೂಕಿನ ವಿಧಾನಸಭಾ ಕ್ಷೇತ್ರದ ಟಿಕೆಟ್ ಟಿಕೆಟ್ ಆಕಾಂಕ್ಷಿಗಳಾಗಿದ್ದು, ಇತರೆ ಟಿಕೆಟ್ ಆಕಾಂಕ್ಷಿಗಳ ಎದೆಯಲ್ಲಿ ಡವಡವ ಶುರುವಾಗಿದೆ!
ಈ ಭೇಟಿಯ ಸಮಯದಲ್ಲಿ ಶಶಾಂಕ್ ಸಿದ್ದು ಪಾವಗಡ ತಾಲೂಕು ಸಮಗ್ರ ಸೇವಾ ಅಭಿವೃದ್ಧಿ ಟ್ರಸ್ಟ್ ಅಧ್ಯಕ್ಷರಾದ ತಿಪ್ಪೇಸ್ವಾಮಿ ಹಾಜರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.