ಯಾದಗಿರಿ:ಡಿಸೆಂಬರ್ 02
ವಡಗೇರಾ ಗ್ರಾಮದ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೊದ್ದಡ್ಡಿ ತೋಟದ ಕಾಡಂಗೇರಾ (ದರ್ಗಾದಿಂದ ಕೊದ್ದಡ್ಡಿ ತೋಟದ)ವರೆಗೆ ರಸ್ತೆ ಸಂಪರ್ಕ ಆದ್ಯತೆ ಮೇಲೆ ಕಲ್ಪಿಸಿಕೊಡುವಂತೆ ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಸಾಹೀಲ್ ಅಹ್ಮದ್ ಕುನ್ನಿಭಾವಿ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದ್ದಾರೆ.
ಜಿಲ್ಲಾ ನ್ಯಾಯಾಲಯದ ಅವರ ಕಛೇರಿ ಆವರಣದಲ್ಲಿ ಇಂದು ದಿನಾಂಕ 02-12-2022 ರಂದು ಈ ಗ್ರಾಮದ ಗ್ರಾಮಸ್ಥರಿಂದ ಮನವಿ ಸ್ವೀಕರಿಸಿದ ಅವರು ಹಲವು ವರ್ಷಗಳಿಂದ ರಸ್ತೆ ಇಲ್ಲದೇ ಈ ಗ್ರಾಮದ ಗ್ರಾಮಸ್ಥರು, ಗರ್ಭೀಣಿ ಮಹಿಳೆಯರು,ಮಕ್ಕಳು ಸಮಸ್ಯೆಗಳನ್ನು ಎದುರಿಸುತ್ತಿದ್ದು ಈ ಕುರಿತು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ದೂರವಾಣಿ ಮೂಲಕ ಚರ್ಚಿಸಿ ಆದ್ಯತೆ ಮೇಲೆ ರಸ್ತೆ ಕಲ್ಪಿಸುವಂತೆ ಹೇಳಿದರು.
ಈ ಗ್ರಾಮದಲ್ಲಿ ಸುಮಾರು 30 ಕುಟುಂಬಗಳು ವಾಸವಾಗಿದ್ದು 100-125 ಜನರು ಕೊದ್ದಡ್ಡಿ ಗ್ರಾಮದಲ್ಲಿ ವಾಸವಾಗಿದ್ದಾರೆ ರಸ್ತೆ ಸರಿಯಿಲ್ಲದ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಮಕ್ಕಳಿಗೆ ವಿಶೇಷವಾಗಿ ಗರ್ಭಿಣಿ ಮಹಿಳೆಯರಿಗೆ ತುರ್ತು ಸಂದರ್ಭದಲ್ಲಿ ಸುಗಮ ಸಂಚಾರಕ್ಕೆ ತೀವ್ರ ಸಮಸ್ಯೆಯಾಗುತ್ತಿದ್ದು ಪಂಚಾಯತ ರಸ್ತೆ ಇದಾಗಿರುವುದರಿಂದ ತುರ್ತಾಗಿ ರಸ್ತೆ ಸಂಪರ್ಕ ಕಲ್ಪಿಸುವಂತೆ ತಿಳಿಸಿದರು.
ಈಗಾಗಲೇ ತಾವು ಖುದ್ದಾಗಿ ಭೇಟಿ ನೀಡಿ ಪರಿಶೀಲಿಸಿದ್ದು ರಸ್ತೆ ಕಿರಿದಾಗಿದೆ ಗ್ರಾಮಸ್ಥರ ಓಡಾಟಕ್ಕೂ ಅನೇಕ ರೀತಿಯ ತೊಂದರೆಯಾಗುತ್ತಿರುವುದು ಕಂಡು ಬಂದಿದ್ದು ಈ ಕುರಿತು ತಕ್ಷಣ ಕ್ರಮ ಕೈಗೊಳ್ಳುವಂತೆಯೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು, ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಹಾಗೂ ಸಂಬಂಧಿಸಿದ ತಹಸೀಲ್ದಾರರಿಗೆ ದೂರವಾಣಿ ಕರೆ ಮಾಡಿ ಸೂಚಿಸಿ,ಪ್ರಕರಣ ದಾಖಲಿಸಲು ಅವಕಾಶ ನೀಡದೇ ತಕ್ಷಣ ಕ್ರಮ ಕೈಗೊಳ್ಳುವಂತೆ ತಿಳಿಸಿದರು ತಾವೂ ಕೂಡಾ ಈ ಗ್ರಾಮಕ್ಕೆ ಶೀಘ್ರವಾಗಿ ಭೇಟಿ ನೀಡಿ ಎ.ಡಿ.ಎಲ್.ಆರ್,ತಾಲೂಕು ಪಂಚಾಯತ ಕಾರ್ಯನಿರ್ವಹಣಾಧಿಕಾರಿ,ಪಿ.ಡಿ.ಓ, ತಹಸೀಲ್ದಾರ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸುವುದಾಗಿ ತಿಳಿಸಿದರು.
ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದ ಸುಮಾರು 50 ಕ್ಕೂ ಹೆಚ್ಚು ಗ್ರಾಮಸ್ಥರು ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿ ಆಸ್ಪತ್ರೆಗಳಿಗೆ ಹೋಗಲು ಗರ್ಭಿಣಿ ಮಹಿಳೆಯರಿಗೆ ಹಾಗೂ ವಿದ್ಯಾಭ್ಯಾಸಕ್ಕೆ ತೆರಳುವ ಮಕ್ಕಳಿಗೆ ತೀವ್ರ ತೊಂದರೆಯಾಗುತ್ತಿದ್ದು,ಸುಸಜ್ಜಿತ ರಸ್ತೆ, ವಿದ್ಯುತ್ ಇತರೆ ಮೂಲಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.