ನೆಲಮಂಗಲ:ಮಂಗಳೂರಿನ ಪೂಂಜಾಲಕಟ್ಟೆ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಸಿಬ್ಬಂದಿಗಳು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವನ್ನು ಪಾಲಿಸಿದ ಮಂಗಳೂರಿನ ಯುವ ವಕೀಲ ಕುಲದೀಪ್ ಶೆಟ್ಟಿಯನ್ನು ಬಂಧಿಸಿ,ಹಲ್ಲೆ ನಡೆಸಿ,ಅವ್ಯಾಚ್ಚವಾಗಿ ನಿಂದಿಸಿರುವುದನ್ನು ಖಂಡಿಸಿ ನೆಲಮಂಗಲ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಕಾನೂನು ಪಾಲಿಸದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಮತ್ತು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಿ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಲ್ಲಾ ವಕೀಲರು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ವಕೀಲರಾದ ಕೆ.ಎನ್.ಸುರೇಶ್,ದಯಾನಂದ ಸ್ವಾಮಿ, ಜಯಣ್ಣ,ಧನಂಜಯ್,ಆರ್.ನಾಗರಾಜು ಸೇರಿದಂತೆ ನೂರಾರು ವಕೀಲರು ಭಾಗವಹಿಸಿದ್ದರು.
