ಸಿರುಗುಪ್ಪ : ರಾಜ್ಯದಲ್ಲಿನ ಗ್ರಾಮಗಳ ಸರ್ವಾಂಗೀಣ ಅಭಿವೃದ್ದಿಗಾಗಿ ಸರ್ಕಾರದ ವತಿಯಿಂದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಯೆಂಬ ಶೀರ್ಷಿಕೆಯಡಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳ ವರ್ಗವೇ ನಿಮ್ಮ ಗ್ರಾಮಕ್ಕೆ ಬಂದು ಸಮಸ್ಯೆಗಳನ್ನು ಆಲಿಸುವುದರೊಂದಿಗೆ ಅವುಗಳನ್ನೇ ಸ್ಥಳದಲ್ಲೇ ಇತ್ಯರ್ಥಗೊಳಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು
ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದೆಂದು ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ತಿಳಿಸಿದರು,
ತಾಲೂಕಿನ ಕರ್ಚಿಗನೂರು ಗ್ರಾಮದ ಶ್ರೀ ಹಾಲ್ವಿ ಅಭಿನವ ಮಹಾಂತ ಶ್ರೀಗಳ ಮಠದ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಶಾಲಾ ಮಕ್ಕಳಿಂದ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು,
ನಂತರ ಮಾತನಾಡಿದ ಅವರು ಗ್ರಾಮದಲ್ಲಿ ಬೀದಿಗಳಲ್ಲಿ ಸಂಚರಿಸಿದಾಗ ಉತ್ತಮ ಅಭಿವೃದ್ದಿಯನ್ನ ಕಾಣಲಾಯಿತು. ಇಲ್ಲಿನ ಸಾರ್ವಜನಿಕರಿಂದ ಕಂದಾಯಕ್ಕೆ ಸಂಬoದಿಸಿದoತೆ ,ಆರೋಗ್ಯ-, ತಾಲೂಕು ಪಂಚಾಯಿತಿಗೆ-7, ಸಾರಿಗೆ ಇಲಾಖೆ-1, ಅಬಕಾರಿ-1, ಗ್ರಾಮೀಣ ಕುಡಿಯುವ ನೀರು-02, ಹಾಗೂ ಸಮಾಜ ಕಲ್ಯಾಣ ಇಲಾಖೆಗೆ ಸಂಬAದಿಸಿದAತೆ 02 ಅರ್ಜಿಗಳು ಸೇರಿ ಒಟ್ಟು 23 ಅರ್ಜಿಗಳು ಬಂದಿದ್ದು, ಬಹು ಮುಖ್ಯವಾಗಿ ಸ್ಮಶಾನಕ್ಕೆ ಭೂಮಿ, ಆರೋಗ್ಯ ಕೇಂದ್ರದ ನಿರ್ಮಾಣಕ್ಕೆ, ಬಸ್ ವ್ಯವಸ್ಥೆಯನ್ನು ಶೀಘ್ರದಲ್ಲಿ ಪರಿಹರಿಸಲಾಗುವುದು.
ಇನ್ನುಳಿದ ಇಲಾಖೆಗಳಿಗೆ ಸಂಬಂಧಿಸಿದಂತೆ
ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು ಗ್ರಾಮಸ್ಥರೆಲ್ಲರೂ ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ರಾಜೇಶ್ವರಿ ಅವರು ಮಾತನಾಡಿ ಗ್ರಾಮದಲ್ಲಿ ಅಂಬೇಡ್ಕರ್ ಪುತ್ಥಳಿ ಸ್ಥಾಪನೆ, ಸಮುದಾಯ ಭವನ ನಿರ್ಮಾಣ ಹಾಗೂ ಸ್ಮಶಾನಕ್ಕಾಗಿ ಭೂಮಿ ಮಂಜೂರಾತಿ ಬಗ್ಗೆ ನಮ್ಮ ಇಲಾಖೆಗೆ ಅರ್ಜಿ ಬಂದಿದ್ದು, ತಹಶೀಲ್ದಾರರ ಮಾರ್ಗಗದರ್ಶನದಲ್ಲಿ ಸರ್ಕಾರಿ ಜಾಗದಲ್ಲಿ ಸುಮಾರು 20ಲಕ್ಷ ವೆಚ್ಚದಲ್ಲಿ ಸಮುದಾಯ ಭವನವನ್ನು ಪರಿಶಿಷ್ಟ ಜಾತಿಯವರೇ ಹೆಚ್ಚಾಗಿ ವಾಸಿಸುವ ಕಾಲೋನಿಗಳಲ್ಲಿ ನಿರ್ಮಾಣಕ್ಕೆ ಸ್ಥಳೀಯ ಗ್ರಾ.ಪಂ. ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗುವುದು ಹಾಗೂ ಸ್ಮಶಾನಕ್ಕೆ ಸಂಬoದಿಸಿದoತೆ ಯಾರಾದರೂ ಗ್ರಾಮಸ್ಥರು ಜಮೀನು ನೀಡಿದಲ್ಲಿ ನಮ್ಮ ಇಲಾಖೆಯಲ್ಲಿ 10 ಲಕ್ಷ ವೆಚ್ಚದಲ್ಲಿ ಸ್ಮಶಾನ ಅಭಿವೃದ್ದಿಗೆ ಯೋಜನೆ ರೂಪಿಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಿಂದ ಪೌಷ್ಟಿಕ ಆಹಾರ ಪ್ರದರ್ಶನ, ಗರ್ಬಿಣಿ ಮಹಿಳೆಯರಿಗೆ ಶೀಮಂತ ಕಾರ್ಯಕ್ರಮ, ಆರೋಗ್ಯ ಇಲಾಖೆಯಿಂದ ಉಚಿತ ಆರೋಗ್ಯ ತಪಾಸಣೆ, ಶಾಲಾ ಮಕ್ಕಳಿಂದ ನೃತ್ಯಗಳು ಜರುಗಿದವು.
ಇದೇ ವೇಳೆ ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಪಾಟೀಲ್, ತಾಲೂಕು ಆರೋಗ್ಯಾಧಿಕಾರಿ ಡಾ.ಈರಣ್ಣ, ಸಿ.ಡಿ.ಪಿ.ಓ ಎ.ಜಲಾಲಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಗರ‍್ರಪ್ಪ, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎ.ಗಾದಿಲಿಂಗಪ್ಪ, ತೋಟಗಾರಿಕೆ ಇಲಾಖೆಯ ಸಹಾಯಕ ಹಿರಿಯ ನಿರ್ದೇಶಕ ಮಹೇಶ, ಗ್ರಾಮ ಪಂಚಾಯಿತಿ ಅಧ್ಯಕ್ಷ ಬಸವರಾಜ ಹಾಗೂ ಇನ್ನಿತರ ಅಧಿಕಾರಿಗಳು, ಗ್ರಾಮಸ್ಥರು ಇದ್ದರು, ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದ ಶ್ರೀ ಹಾಲ್ವಿ ಅಭಿನವ ಮಹಾಂತ ಶ್ರೀಗಳ ಮಠದ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ತಹಶೀಲ್ದಾರ್ ಎನ್.ಆರ್.ಮಂಜುನಾಥಸ್ವಾಮಿ ಅವರು ಶಾಲಾ ಮಕ್ಕಳಿಂದ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು, ಸಿರುಗುಪ್ಪ ತಾಲೂಕಿನ ಕರ್ಚಿಗನೂರು ಗ್ರಾಮದ ಶ್ರೀ ಹಾಲ್ವಿ ಅಭಿನವ ಮಹಾಂತ ಶ್ರೀಗಳ ಮಠದ ಆವರಣದಲ್ಲಿ ನಡೆದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಗ್ರಾಮ ವಾಸ್ತವ್ಯ ಕಾರ್ಯಕ್ರಮದ ಅಂಗವಾಗಿ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.
ವರದಿ: ಎಂ ಪವನ್ ಕುಮಾರ್