ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಮಳೆಹನಿಯನ್ನು ಲೆಕ್ಕಿಸದ ಜಿಲ್ಲಾಧಿಕಾರಿ ರವರು ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ. ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ

ಹನೂರು : ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಇಂದು ಮತದಾರರ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.ಹನೂರು ತಾಲೂಕಿನ ಶಾಗ್ಯ ಗ್ರಾಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆಗೂಡಿ ಭೇಟಿ ನೀಡಿದ ಜಿಲ್ಲಾಧಿಕಾರಿ ಡಿಎಸ್.ರಮೇಶ್ ಅವರು ಬಸ್ ನಿಲ್ಧಾಣ ಸೇರಿದಂತೆ ಮಠದ ಬೀದಿ ಹಾಗೂ ವಿವಿಧ ಬಡಾವಣೆಗಳ ಮನೆ ಮನೆಗೆ ತೆರಳಿ ಮತದಾರರನ್ನು ಸಂಪರ್ಕಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಮಾಹಿತಿ ಪಡೆದರು. ಅಲ್ಲದೆ ಗ್ರಾಮದಲ್ಲಿ ಮೃತಪಟ್ಟಿರುವವರ ಹೆಸರು ಹೇಳಿ ಇವರು ಮೃತಹೊಂದಿದ್ದಾರೆಯೇ? ಅಥವಾ ಬದುಕಿದ್ದಾರಯೇ, ಒಂದು ವೇಳೆ ಮತದಾರರು ಇದ್ದರು ಸಹ ಕೈಬಿಟ್ಟುಹೋಗಿದ್ದೇಯೇ ಎಂದು ಪ್ರಶ್ನಿಸಿ ಮತದಾರರಿಂದ ಖಚಿತ ಮಾಹಿತಿಯನ್ನು ಪಡೆದುಕೊಂಡು ದೃಢಪಡಿಸಿಕೊಂಡರುಹನೂರು ಪಟ್ಟಣದಿಂದ ಶಾಗ್ಯ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಗುಂಡಿ ಬಿದ್ದಿದೆ. ಕೆಲವು ಬಡಾವಣೆಗಳಿಗೆ ಚರಂಡಿ ಅಗತ್ಯವಾಗಿದೆ ಗ್ರಾಮಗಳ ಅಭಿವೃದ್ಧಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕು ಅಲ್ಲದೆ ಸಕಾಲದಲ್ಲಿ ಜನರ ಸಮಸ್ಯೆ ಬಗರಹರಿಸುವಂತೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಮೌಖಿಕವಾಗಿ ಮನವಿ ಮಾಡಿದರು.ಮಳೆಹನಿಯನ್ನು ಲೆಕ್ಕಿಸದ ಡಿಸಿ ರಮೇಶ್ ಅವರು ಬಂಡಳ್ಳಿ, ಮಣಗಳ್ಳಿ, ನಾಗನತ್ತ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಿದರು.
ಕೊಳ್ಳೇಗಾಲ ಉಪವಿಭಾಧಿಕಾರಿ ಗೀತಾಹುಡೇದಾ, ಹನೂರು ತಹಸೀಲ್ಧಾರ್ ಆನಂದಯ್ಯ, ಪಿಡಿಒ ರಾಮು, ರಾಜಸ್ವನಿರೀಕ್ಷ ಮಹದೇವಸ್ವಾಮಿ, ಗ್ರಾಮ ಆಡಳಿತ ಅಧಿಕಾರಿ ಕುಮಾರ್, ಶಿಕ್ಷಕ ಪುಟ್ಟಸ್ವಾಮಿ, ಬಿಎಲ್‌ಒ ಹಾಗೂ ಮತ್ತಿತರರು ಇದ್ದರು.

ವರದಿ- ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ