ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ರಾರಾವಿ ಗ್ರಾಮದಲ್ಲಿ ಇಂದು ಲಕ್ಷ್ಮಣ ಗೆಳೆಯರ ಬಳಗದಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು..
ಶಿಬಿರ ಉದ್ಘಾಟನೆ ಮಾಡಿ ಮಾತನಾಡಿದ THO ಡಾ. ಈರಣ್ಣ ಅವರು ಗ್ರಾಮೀಣ ಪ್ರದೇಶದಲ್ಲಿ ಸಾರ್ವಜನಿಕರು ವಿಶೇಷವಾಗಿ ಕಾರ್ಮಿಕರು,ರೈತ ಮಹಿಳೆಯರು ಅಜ್ಞಾನ,ಅಂಧಕಾರದಿಂದಾಗಿ ಅನೇಕ ಆರೋಗ್ಯ ಸಮಸ್ಯೆಗಳಿಗೆ ತುತ್ತಾಗಿ ರೋಗ ಉಲ್ಬಣಗೊಂಡಾಗ ವೈದ್ಯರನ್ನು ಸಂಪರ್ಕ ಮಾಡುತ್ತಾರೆ..
ಬೇಗನೆ ಸಕಾಲದಲ್ಲಿ ವೈದ್ಯರ ಹತ್ತಿರ ಚಿಕಿತ್ಸೆ ತೆಗೆದುಕೊಂಡರೆ ಬಹಳಷ್ಟು ಸಮಸ್ಯೆಗಳು ನಿವಾರಣೆ ಆಗುತ್ತವೆ ಆದ್ದರಿಂದ ಸಾರ್ವಜನಿಕರು ಇಂತಹ ಆರೋಗ್ಯ ಶಿಬಿರಗಳ ಪ್ರಯೋಜನ ಪಡೆದುಕೊಳ್ಳಲು ತಿಳಿಸಿದರು
ರಾರಾವಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಬಸವರಾಜ್ ಮಾತನಾಡಿ ಇಂತಹ ಶಿಬಿರಗಳು ಜನಸಾಮಾನ್ಯರಲ್ಲಿ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸುವಲ್ಲಿ ಸಹಕಾರಿಯಾಗುತ್ತವೆ ಎಂದು ತಿಳಿಸಿದರು..
ಹಿರಿಯ ಫಾರ್ಮಸಿ ಅಧಿಕಾರಿ ಮಲ್ಲಿಕಾರ್ಜುನ ಮಾತನಾಡಿದರು
ಹಿರಿಯ ಆರೋಗ್ಯ ಅಧಿಕಾರಿ ಮಲ್ಲಿಕಾರ್ಜುನ ಗೌಡ, ಶಾಲೆ ಶಿಕ್ಷಕ ವರ್ಗದವರು,ಇನ್ನಿತರೇ ಹಿರಿಯ ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಹಿರಿಯ ನಾಗರೀಕರಿಗೆ ಕಣ್ಣು ತಪಾಸಣೆ,ಬಿಪಿ ಮತ್ತು ಮಧುಮೇಹ ತಪಾಸಣೆ ಮಾಡಲಾಯಿತು.