ಯಾದಗಿರಿ: ಜಿಲ್ಲೆಯ ವಡಗೇರಾ ತಾಲೂಕಿನ ಕೋನಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶದಲ್ಲಿ ಮೊನ್ನೆ ಹುಲ್ಲು ತೋಪು ಸುಡುವ ಸಂದರ್ಭದಲ್ಲಿ ಬೆಂಕಿಗಾಹುತಿಯಾಗಿ ಅರಣ್ಯ ಇಲಾಖೆಯಲ್ಲಿ ದಿನ ಗೂಲಿ ನೌಕರನಾಗಿ ಕೆಲಸಮಾಡುತ್ತಿದ್ದ ಕೋನಹಳ್ಳಿ ಗ್ರಾಮದ ಯಾಕೂಬ್ ಸಾಬ್ (50)ಎಂಬ ವ್ಯಕ್ತಿ ಸಾವನ್ನಪಿದ ಸುದ್ದಿ ತಿಳಿದು ತಕ್ಷಣವೇ ಅರಣ್ಯ ಪ್ರದೇಶದ ಘಟನಾಸ್ಥಳಕ್ಕೆ ಭೇಟಿ ನೀಡಿದ ಕೆ ಪಿ ಸಿ ಸಿ ಅಸಂಘಟಿತ ಕಾರ್ಮಿಕರ ಕಾಂಗ್ರೆಸ್ ವಿಭಾಗದ ರಾಜ್ಯ ಕಾರ್ಯದರ್ಶಿಗಳಾದ
ಶ್ರೀಬಾಷುಮಿಯಾ ವಡಗೇರಾ ಅವರು ತಡರಾತ್ರಿಯವರೆಗೂ ಅಲ್ಲೇ ಇದ್ದು ಸೂಕ್ತ ಕಾನೂನು ಕ್ರಮಕ್ಕೆ ಆಗ್ರಹಿಸಿ ಮೃತ ದಿನಗೂಲಿ ಕಾರ್ಮಿಕನ ಕುಟುಂಬಕ್ಕೆ ಸಾಂತ್ವನ ಹೇಳಿ ನಿರ್ಲಕ್ಷ ತೋರಿದ ಅರಣ್ಯ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕೂಡಲೇ ಅರಣ್ಯ ಇಲಾಖೆ ಮೃತ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ಹಾಗು ಕುಟುಂಬ ಸದಸ್ಯರ ಒಬ್ಬರಿಗೆ ಸರಕಾರಿ ಕೆಲಸ ನೀಡಿ ಮೃತ ಕಾರ್ಮಿಕನ ಕುಟುಂಬಕ್ಕೆ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಆಗ್ರಹಿಸಿ ಮೃತ ಕಾರ್ಮಿಕನ ಕುಟುಂಬಕ್ಕೆ
ಸಾಂತ್ವನ ಹೇಳಿ ಕುಟುಂಬಕ್ಕೆ ಸಾಂತ್ವನ ಹೇಳಿ ಈ ಘಟನೆಯ ಬಗ್ಗೆ ತೀವ್ರ ವಿಷಾದ ವ್ಯಕ್ತಪಡಿಸಿದರು.
ಈ ಸಂಧರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಿರಿಯ ಮುಖಂಡರು ಮತ್ತು ಊರಿನ ಗ್ರಾಮಸ್ಥರು ಹಾಜರಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ ಶಹಾಪುರ