ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

ಕರುನಾಡಕಂದ ಸುದ್ದಿಪತ್ರಿಕೆ ಮತ್ತು ಆನ್‌ಲೈನ್‌ ತಾಣದ "ಕರುನಾಡ ಕಂದ ಜನಜಾಗೃತಿ ವೇದಿಕೆಯ ವಿಶೇಷ ಪುಟಕ್ಕೆ ಭೇಟಿ ನೀಡಿ

ಕೇರಳ ಗಡಿನಾಡಿನಲ್ಲಿ ಕನ್ನಡ ವೈಭವೀಕರಣ ಶ್ಲಾಘನೀಯ-ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ

ದಾವಣಗೆರೆ:ಜ.18.ಸಾವಿರಾರು ವರ್ಷಗಳ ಇತಿಹಾಸ ಪರಂಪರೆಯ ಕನ್ನಡ ಭಾಷೆ ಪೂಜನೀಯ ರನ್ನ, ಪೊನ್ನ, ರಾಘವಾಂಕ, ಕುವೆಂಪು ಸೇರಿದಂತೆ ಹಲವಾರು ಸಾಹಿತ್ಯ ದಿಗ್ಗಜರು ಕವಿ ಪುಂಗವರು ಸಾಧನೆಗಳೊಂದಿಗೆ
ಈ ಭಾಷೆಗೆ ಮೌಲ್ಯ ತಂದುಕೊಟ್ಟಿದ್ದು ನಮ್ಮೆಲ್ಲರ ಭಾಗ್ಯ, ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಕೇರಳ ಗಡಿನಾಡಿನಲ್ಲಿ ಕನ್ನಡ ಭಾಷೆಯನ್ನು ವೈಭವೀಕರಿಸುತ್ತಿರುವುದು ಶ್ಲಾಘನೀಯ ಎಂದು ಕೇರಳ ರಾಜ್ಯದ, ಕಾಸರಗೋಡು ಜಿಲ್ಲೆಯ, ಕೊಂಡೆಯೂರಿನ ಸದ್ಗುರು ಶ್ರೀನಿತ್ಯಾನಂದ ಯೋಗಾಶ್ರಮದ ಶ್ರೀಮಠದ ಮಠಾಧೀಶರಾದ ಶ್ರೀ ಶ್ರೀ ಶ್ರೀಯೋಗಾನಂದ ಸರಸ್ವತಿ ಸ್ವಾಮೀಜಿಯವರು ತಮ್ಮ ಆಶೀವರ್ಚನದಲ್ಲಿ ವ್ಯಕ್ತಪಡಿಸಿದರು.ಕೇರಳ ರಾಜ್ಯದ, ಕಾಸರಗೋಡು ಜಿಲ್ಲೆಯ,ಕೊಂಡೆಯೂರಿನ ಸದ್ಗುರು ಶ್ರೀನಿತ್ಯಾನಂದ ಯೋಗಾಶ್ರಮ ಸಭಾಂಗಣದಲ್ಲಿ ಇತ್ತೀಚೆಗೆ ಕಲಾಕುಂಚ ಗಡಿನಾಡ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವ ಹಾಗೂ ಸಂಸ್ಥೆಯ ಸಂಸ್ಥಾಪನಾ ದಿನಾಚರಣೆಯ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಮಾತನಾಡಿದರು. ಸಮಾರಂಭವನ್ನು ಉದ್ಘಾಟಿಸಿದ ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ಮಾತನಾಡಿ,ಇತ್ತೀಚಿನ ದಿನಮಾನಗಳಲ್ಲಿ ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ನಮ್ಮ ಸಂಸ್ಕೃತಿ, ಸಂಸ್ಕಾರ, ಕನ್ನಡ ನಾಡು, ನುಡಿಯ ಪರಂಪರೆ ಮರೆಯಾಗುತ್ತಿರುವುದು ವಿಷಾದನೀಯ. ಬಾಲ್ಯದಲ್ಲೇ ಮಕ್ಕಳಿಗೆ ನಮ್ಮ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಗಳನ್ನು ಬೆಳೆಸುವುದು ಪೋಷಕರ ಅಧ್ಯ ಕರ್ತವ್ಯ ಎಂದು ತಮ್ಮ ಅಭಿಮತ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕಲಾಕುಂಚ ಕೇರಳ ಶಾಖೆಯ ಅಧ್ಯಕ್ಷರು, ಹಿರಿಯ ಯಕ್ಷಗಾನ, ಸಾಹಿತ್ಯದ ವಿದ್ವಾಂಸರಾದ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರವರು ಮಾತನಾಡಿ, ನಮ್ಮ ಆಧ್ಯಾತ್ಮ ಪರಂಪರೆಯ, ಸಾಂಸ್ಕೃತಿಕ ಚಟುವಟಿಕೆಗಳೇ ದೇವರ ಪೂಜೆ. ಇದರಿಂದ ಮಾನವನ ಜೀವನಕ್ಕೆ ಸಾರ್ಥಕತೆ ಬರುತ್ತದೆ ಎಂದರು. ಕೊಂಡೆಯೂರಿನ ಎನ್.ವಿ.ಪಿ.ಶಾಲೆಯ ಮಕ್ಕಳಿಂದ ಭಗವದ್ಗೀತೆಯ ಧ್ಯಾನ ಶ್ಲೋಕದ ಪ್ರಾರ್ಥನೆಯೊಂದಿಗೆ ಪ್ರಾರಂಭದ ಕಾರ್ಯಕ್ರಮಕ್ಕೆ ಸರಸ್ವತಿಹೊಳ್ಳ ಸ್ವಾಗತಿಸಿದರು. ರಘುಪ್ರಸಾದ್‌ರವರು ಅಚ್ಚುಕಟ್ಟಾಗಿ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಗೌರವಾಧ್ಯಕ್ಷರಾದ ವಿ.ಬಿ. ಕುಳಮರ್ವ, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಶಿಕ್ಷಕಿ, ಸಾಹಿತಿಗಳಾದ ಡಾ. ಅಪರ್ಣಾ ಹರೀಶ್‌ಸುಲಾಯ ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಉಪಸ್ಥಿತರಿದ್ದು ಸಮಾರಂಭಕ್ಕೆ ಶುಭಕೋರಿದರು. ಕೊನೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾರಾಮ್ ರಾವ್ ವಂದಿಸಿದರು.
ಈ ಸಮಾರಂಭದ ಅಂಗವಾಗಿ ಹಮ್ಮಿಕೊಳ್ಳಲಾದ ಸಮೂಹ ಭಜನಾ ಸ್ಪರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಭಾ ಕಾರ್ಯಕ್ರಮದ ನಂತರ ಕುಮಾರ ಸುಮುಖ ಹೆಬ್ಬಾರ ಇವರಿಂದ ಹರಿಕಥಾ ಕಾಲಾಕ್ಷೇಪ, ಕುಮಾರಿಯವರಾದ ಗಾಯತ್ರಿ, ಶ್ರಾವಣ್ಯರವರಿಂದ ವಾಯಲಿನ್ ವಾದನ, ರಾಧಾಮಣ , ಸುನೀತಾರವರಿಂದ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ ಕೊಂಡೆಯೂರಿನ ಎಸ್.ಎಸ್.ಎನ್.ವಿ.ಪಿ. ಶಾಲೆಯ ಮಕ್ಕಳಿಂದ ಓನಕೆ ಓಬವ್ವ ವೀರ ಕಥನ ಪ್ರಹಸನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ನೆರೆದ ಪ್ರೇಕ್ಷಕರು ತಮ್ಮ ಮೆಚ್ಚುಗೆ ವ್ಯಕ್ತಪಡಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ