ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನರೇಗಾದಡಿ ನಾಗಲಾಪುರ ಕೆರೆ ಹೂಳೆತ್ತುವ ಕಾಮಗಾರಿ ಕೆಲಸಕ್ಕೆ ತೆರಳಿ ಕೂಲಿ ಕೆಲಸದ ಸಮಯದಲ್ಲಿ ಹೃದಯಾಘಾತದಿಂದ ನಿಧನರಾದ ಕೆಸರಹಟ್ಟಿ ಗ್ರಾಮದ ಮಲ್ಲಿಕಾರ್ಜುನ ವಿರುಪಣ್ಣ ಅವರ ಮನೆಗೆ ಜಿಲ್ಲಾ ಪಂಚಾಯತ ಮಾನ್ಯ ಯೋಜನಾ ನಿರ್ದೇಶಕರಾದ ಕೃಷ್ಣಮೂರ್ತಿ ಟಿ.ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.
ಈ ವೇಳೆ ಮೃತರ ಪತ್ನಿ ಲಕ್ಷ್ಮಿ ಮಲ್ಲಿಕಾರ್ಜುನ್ ಅವರ ಮಕ್ಕಳ ವಿದ್ಯಾಭ್ಯಾಸ,ನರೇಗಾ ಯೋಜನೆಯಡಿ ವೈಯಕ್ತಿಕ ಕಾಮಗಾರಿಗಳನ್ನು ಅನುಷ್ಠಾನ ಮಾಡಿಕೊಡುವುದಾಗಿ ಹಾಗೂ
ಸರ್ಕಾರಿ ಸೌಲಭ್ಯ ಲಭಿಸುವಂತೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ತಾ.ಪಂ ಸಹಾಯಕ ನಿರ್ದೇಶಕರಾದ ನಾಗೇಶ್ ಕುರಡಿ,ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಕೃಷ್ಣ,ತಾ.ಪಂ ವಿಷಯ ನಿರ್ವಾಹಕ ಭೀಮಣ್ಣ,ಗ್ರಾ.ಪಂ ಸಿಬ್ಬಂದಿಗಳು,ಇತರರಿದ್ದರು.



















