ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಬಾಲ್ಯವಿವಾಹ ತಡೆಗಟ್ಟಲು ಕ್ರಮಕೈಗೊಳ್ಳಿ:ಅಧ್ಯಕ್ಷ ಕೆ.ನಾಗಣ್ಣಗೌಡ ಸೂಚನೆ

ವಿಜಯಪುರ:ಮಕ್ಕಳಲ್ಲಿ ಉತ್ತಮ ಮನೋಭಾವ, ಸನ್ನಡತೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಹಾಗೂ ಮಕ್ಕಳ ರಕ್ಷಣೆಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಸಂಬಂಧಿಸಿದ ಎಲ್ಲ ಇಲಾಖೆ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಮಕ್ಕಳ ಹಕ್ಕುಗಳ ರಕ್ಷಣೆಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವಂತೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯಪುರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆರ್.ಟಿ.ಇ-2009,ಪೋಕ್ಸ್ ಕಾಯ್ದೆ-2012,ಬಾಲನ್ಯಾಯ ಕಾಯ್ದೆ-2015ರ ಅನುಷ್ಠಾನ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಸರ್ಕಾರಗಳು ವಿವಿಧ ಯೋಜನೆಗಳನ್ನು ಜಾರಿಗೊಳಿಸಿದರೂ ಅನುಷ್ಠಾನದಲ್ಲಿ ಅಧಿಕಾರಿಗಳ ಜವಾಬ್ದಾರಿ ಹೆಚ್ಚಿರುತ್ತದೆ.ಕೋವಿಡ್-19 ದಿಂದಾಗಿ ಪಾಲಕರನ್ನು ಕಳೆದುಕೊಂಡ ಮಕ್ಕಳು, ಶಾಲೆಯಿಂದ ಹೊರಗುಳಿದ ಮಕ್ಕಳು,ಪೋಷಣೆ ಮತ್ತು ರಕ್ಷಣೆ ಅವಶ್ಯವಿರುವ ಮಕ್ಕಳಿಗೆ ಮುಖ್ಯವಾಹಿನಿಗೆ ತರಲು ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.

ಗ್ರಾಮಗಳಲ್ಲಿ ಅಂಗನವಾಡಿ ಕೇಂದ್ರ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪೌಷ್ಠಿಕ ಆಹಾರದ ಕುರಿತು ಅರಿವು ಮೂಡಿಸಬೇಕು.ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು. ಶಿಶುಗಳು ಹಾಗೂ ಮಕ್ಕಳು ಮರಣ ಹೊಂದುತ್ತಿರುವ ಕುರಿತು ಹೆಚ್ಚು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಅವರು ಸೂಚನೆ ನೀಡಿದರು.ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಅಗತ್ಯವಿರುವ ಶಾಲಾ ಕೊಠಡಿ, ಶೌಚಾಲಯ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ನರೇಗಾದಲ್ಲಿಯೂ ಶಾಲೆಗಳಲ್ಲಿ ಶೌಚಾಲಯ ಕಟ್ಟಲು ಅವಕಾಶವಿರುವುದರಿಂದ ಈ ಯೋಜನೆಯ ಬಳಕೆ ಮಾಡಿಕೊಳ್ಳಬೇಕು. ಶಾಲೆಯಲ್ಲಿ ಮಕ್ಕಳಿಗೆ ಸುರಕ್ಷತೆ ಮತ್ತು ಅಸುರಕ್ಷತೆ ಕುರಿತು ತಿಳುವಳಿಕೆ ಮೂಡಿಸಬೇಕು. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಮಕ್ಕಳ ಮೇಲಿನ ದೌರ್ಜನ್ಯಕ್ಕೆ 20 ವರ್ಷಗಳ ಜೈಲು ಶಿಕೆ ಕುರಿತು ಮಕ್ಕಳು ಹಾಗೂ ಪಾಲಕರಲ್ಲಿ ಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಔಷಧಿ ಅಂಗಡಿಗಳಲ್ಲಿ ವಯಸ್ಕರಿಗೆ ನೀಡುವ ವಸ್ತು ಔಷಧಿಗಳನ್ನು ನೀಡದಂತೆ ಜಿಲ್ಲಾಧಿಕಾರಿಗಳ ಮೂಲಕ ಪ್ರತ್ಯೇಕ ಆದೇಶ ಹೊರಡಿಸಬೇಕು. ಶಿಕ್ಷಣ, ಆರೋಗ್ಯ, ಕಂದಾಯ, ಪಂಚಾಯತ ರಾಜ್ಯ ಪೊಲೀಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹೋಗದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಮತ್ತು ಮದ್ಯಪಾನ, ಬಾರ್‌ಗಳಲ್ಲಿ ಮಕ್ಕಳಿಗೆ ಕೆಲಸ, ಅಥವಾ ಮದ್ಯ ಮಾರಾಟ ನಿಷೇಧ ಕುರಿತು ಅರಿವು ಮೂಡಿಸಬೇಕು. ತಂಬಾಕು ಉತ್ಪನ್ನಗಳನ್ನು ಶಾಲಾ ಆವರಣದಲ್ಲಿ ಮಾರಾಟ ಮಾಡದಂತೆ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದರು.

ಮಕ್ಕಳ ರಕ್ಷಣೆಗಾಗಿ ಜಾರಿಗೆ ಬಂದಿರುವ ಜೆಜೆಬಿ, ಆರ್.ಟಿ.ಇ.ಪೋಕ್ಸೋ ದೌರ್ಜನ್ಯ ತಡೆ ಕಾಯ್ದೆಗಳು ಸಮಾಜದಲ್ಲಿ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯತ ಮಟ್ಟದಲ್ಲಿ ಅಧಿಕಾರಿಗಳ ಸಮಿತಿ ರಚಿಸಲಾಗಿದೆ. ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ, ಈ ಯೋಜನೆಗಳ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮಾತನಾಡಿ, ಜಿಲ್ಲೆಯಲ್ಲಿ 1648 ಶಾಲೆ ಬಿಟ್ಟ ಮಕ್ಕಳನ್ನು ಗುರುತಿಸಲಾಗಿದೆ. ಅದರಲ್ಲಿ 539 ಮಕ್ಕಳನ್ನು ಶಾಲೆಗೆ ದಾಖಲಾಗಿಸಿದೆ. 90 ಮಕ್ಕಳು ವಲಸೆ ಹೋಗಿರುತ್ತಾರೆ, 03 ಮಕ್ಕಳು ಅನಾರೋಗ್ಯ ಪೀಡಿತರಾಗಿರುತ್ತಾರೆ, 04 ಮಕ್ಕಳು ಚಿಕ್ಕ ವಯಸ್ಸಿನ ಮಕ್ಕಳು ಇದ್ದು, 1001 ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಲಾಗುತ್ತಿದೆ. ಅಂಗವೀಕಲತೆ ಮಕ್ಕಳು, ಶಿಳು ತುಟಿ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗುತ್ತಿದೆ. ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ವೆಂಕಣ್ಣ ಬಿ. ಹೊಸಮನಿ, ಡಿವೈಎಸ್‌ಪಿ ಸಿದ್ದೇಶ್ವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರು, ಸದಸ್ಯರು, ಸರ್ಕಾರಿ ಹಾಗೂ ಸರ್ಕಾರೇತರ ಸಂಸ್ಥೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಶ್ರೀಮತಿ ಗೀತಾ ಗುತ್ತರಗಿಮಠ ವಂದಿಸಿದರು.

ವರದಿ:ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ