ಹನೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮತ ಹಾಕುವ ಹಕ್ಕು ಇದೆ ಅದರಿಂದ ಯಾರು ವಂಚಿತರಾಗಬಾರದು. ಈ ನಿಟ್ಟಿನಲ್ಲಿ ಪ್ರತಿ ಬೂತ್ ಮಟ್ಟದ ಅಧಿಕಾರಿಗಳು ಜನರಿಗೆ ಮಾಹಿತಿ ನೀಡಬೇಕು ಎಂದು ತಹಶೀಲ್ದಾರ್ ಆನಂದಯ್ಯ ರವರು ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಆಯೋಜಿಸಲಾಗಿದ್ದ 13 ನೆಯ ವರ್ಷದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
1950 ಜನವರಿ 25 ಚುನಾವಣಾ ಆಯೋಗ ಸ್ಥಾಪನೆಯಾದ ನೆನಪಿಗಾಗಿ ಆಯೋಗದ ಆದೇಶದ ಮೇರಿಗೆ 2011 ರಿಂದ ಜನವರಿ 25 ರಂದು ಮತದಾರ ದಿನಾಚರಣೆ ಮಾಡಲಾಗುತ್ತಿದೆ ಅದರಂತೆ ಇಂದು 13 ನೆ ವರ್ಷದ ಆಚರಣೆ ಪ್ರಯುಕ್ತ ಇಂದು, ಪ್ರಜಾಪ್ರಭುತ್ವದಲ್ಲಿ ದೃಢ ವಿಶ್ವಾಸವುಳ್ಳ ಭಾರತದ ಪೌರರಾದ ನಾವು ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮತ್ತು ಮುಕ್ತ ನ್ಯಾಯ ಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿ ಹಿಡಿಯುತ್ತೇವೆಂದು,ಚುನಾವಣೆಯಲ್ಲಿ ನಿರ್ಭೀತಿಯಿಂದ ಯಾವುದೇ ನಿರ್ಧಾಕ್ಷಿಣ್ಯಗಳಿಂದ ಪ್ರಭಾವಿತರಾಗದೆ ಮತ ಚಲಾಯಿಸುತ್ತೆವೆಂದು ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು.
ಮತದಾನದಿಂದ ಯಾರೊಬ್ಬರೂ ವಂಚಿತರಾಗಬಾರದು ಎಂಬ ಉದ್ದೇಶದಿಂದ ಯುವ ಮತದಾರರನ್ನು ನೋಂದಣಿ ಮಾಡಿಕೊಳ್ಳುವ ಮತ್ತು ಮತದಾನದಲ್ಲಿ ಕಡ್ಡಾಯವಾಗಿ ಭಾಗಿಯಾಗುವಂತೆ ಮಾಹಿತಿ ನೀಡಬೇಕು ಎಂದು ಬಿ ಎಲ್ ಓ ಗಳಿಗೆ ಸೂಚನೆ ನೀಡಿದರು.
ಇದೇ ವೇಳೆ ಬಿ ಎಲ್ ಓ ಆಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಜ್ಯೋತಿ ಮತ್ತು ಮಾದೇಶ್ ರವರಿಗೆ ಸನ್ಮಾನ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರೇಡ್ 2 ತಹಶೀಲ್ದಾರ್ ಧನಂಜಯ, ತಾಲೂಕು ಪಂಚಾಯಿತಿ ಇ.ಒ ಶ್ರೀನಿವಾಸ್,ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಮೂರ್ತಿ, ಶಿರಸ್ತೇದಾರ್ ನಾಗೇಂದ್ರ, ರಾಜಶ್ವನಿರೀಕ್ಷಕ ಮಹಾದೇವಸ್ವಾಮಿ, ಗ್ರಾಮ ಲೆಕ್ಕಾಧಿಕಾರಿ ಶೇಷಣ್ಣ, ಬಿ ಎಲ್ ಓ ಗಳು ಹಾಗೂ ಕಾಲೇಜು ವಿದ್ಯಾರ್ಥಿಗಳು, ಹಾಜರಿದ್ದರು.
ವರದಿ ಉಸ್ಮಾನ್ ಖಾನ್.