ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಬೈಕ್-ಗೂಡ್ಸ್ ಟೆಂಪೋ ಮುಖಾಮುಖಿ ಡಿಕ್ಕಿ: ಪಿಡಿಓ ಆಸ್ಪತ್ರೆಗೆ ದಾಖಲು

ಹನೂರು :ಕರ್ತವ್ಯಕ್ಕಾಗಿ ಹಾಜರಾಗುತ್ತಿದ್ದ ಸಮಯದಲ್ಲಿ ಗೂಡ್ಸ್ ಟೆಂಪೋ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಇವರನ್ನು ಹನೂರು ತಾಲ್ಲೂಕು ಪಂಚಾಯತಿಯ ದಿನ್ನಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ಪಿಡಿಓ ಸೋಮಶೇಖರ್ ಎಂದು ಗುರುತ್ತಿಸಲಾಗಿದೆ.
ದಿನ್ನಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಗಣ ರಾಜ್ಯೋತ್ಸವ ಕಾರ್ಯಕ್ರಮ ಮುಗಿಸಿ ಚಾಮರಾಜನಗರದಲ್ಲಿ ನಡೆಯುವ ಅಧಿಕಾರಿಗಳ ಸಭೆಗೆ ತೆರಳಲು ಬೈಕ್‍ನಲ್ಲಿ ಹನೂರಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ
ಎದುರುಗಡೆಯಿಂದ ಬಂದ ಕೋಳಿ ಸಾಗಾಣಿಕೆ ಗೂಡ್ಸ್ ಟೆಂಪೋ ಬೈಕ್‍ಗೆ ಡಿಕ್ಕಿ ಹೊಡೆಯಿತು ಎನ್ನಲಾಗಿದೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿರುವ ಸೋಮಶೇಖರ್ ಅವರನ್ನು ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಾಮಗೆರೆ ಹೋಲಿ ಕ್ರಾಸ್ ಆಸ್ಪತ್ರೆಗೆ ಕಳಿಸಲಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ