ಸಿಂಧನೂರು ನಗರದ ಕಾರುಣ್ಯ ನೆಲೆ ವೃದ್ಧಾಶ್ರಮ ಹಾಗೂ ವಯಸ್ಕರ ಬುದ್ಧಿಮಾಂದ್ಯ ಆಶ್ರಮದಲ್ಲಿ ಕರ್ನಾಟಕ ಯುವಶಕ್ತಿ ಸೇವಾ ಟ್ರಸ್ಟ್ ವತಿಯಿಂದ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನೆರವೇರಿತು. ಈ ಕಾರ್ಯಕ್ರಮದಲ್ಲಿ ಮಹಾತ್ಮ ಗಾಂಧಿ ಡಾ.ಬಿ.ಆರ್. ಅಂಬೇಡ್ಕರ್ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಭಾವಚಿತ್ರಗಳಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ನಮನ ಸಲ್ಲಿಸಲಾಯಿತು.ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಯನ್ನು ಅನಿಕೇತನ ಕಾಲೇಜಿನ ಪ್ರಾಂಶುಪಾಲರಾದ ತಿಮ್ಮಯ್ಯ ನಾಯಕ ಇಂದಿನ 74ನೇ ಗಣರಾಜ್ಯೋತ್ಸವವನ್ನು ಇಂತಹ ನೊಂದು ಬೆಂದ ಜೀವಿಗಳ ಜೊತೆ ಆಚರಣೆ ಮಾಡುತ್ತಿರುವುದು ಸಮಾಜಕ್ಕೆ ಮಾದರಿ ಕಾರ್ಯಕ್ರಮ ಎನ್ನಬಹುದು ಬರೀ ನಾವು ಧ್ವಜ ಹಾರಿಸುವುದರ ಮೂಲಕ ಗಣರಾಜ್ಯೋತ್ಸವವನ್ನು ಮಾಡುತ್ತಿದ್ದೇವೆ ಹೊರತು ಸರ್ಕಾರದ ಸವಲತ್ತುಗಳನ್ನು ಪ್ರಾಮಾಣಿಕವಾಗಿ ದುಡಿಯುವಂತಹ ಇಂತಹ ಸಂಸ್ಥೆಗಳಿಗೆ ಕೊಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಬೇಕು ನಾವು ಕೂಡ ನಮ್ಮ ಕಾಲೇಜಿನಲ್ಲಿ ಹಿರಿಯ ನಾಗರಿಕರ ಸೇವೆಯ ಬಗ್ಗೆ ದಿನಾಲೂ ಕೂಡ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುವುದರ ಮೂಲಕ ನಾನಾ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದೇವೆ ಎಂದು ಮಾತನಾಡಿದರು ನಂತರ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ಕರ್ನಾಟಕ ಯುವ ಶಕ್ತಿ ಸೇವಾ ಟ್ರಸ್ಟ್ ನ ರಾಜ್ಯಾಧ್ಯಕ್ಷರಾದ ಸಂತೋಷ ಅಂಗಡಿ ಸ್ವಾತಂತ್ರ್ಯ ಹೋರಾಟದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪಾತ್ರ ಪ್ರಮುಖವಾಗಿತ್ತು. ಗಣರಾಜ್ಯೋತ್ಸವದ ದಿನದಂದು ಅವರು ಜಗತ್ತನ್ನು ಬಿಟ್ಟು ಹೋದರು ಇದೇ ರೀತಿ ಅದೆಷ್ಟೋ ಮಹಾತ್ಮರು ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವನ್ನೇ ತ್ಯಾಗ ಮಾಡಿದ ಎಲ್ಲರನ್ನೂ ನೆನೆಯಬೇಕಾದದ್ದು ನಮ್ಮೆಲ್ಲರ ಆದ್ಯ ಕರ್ತವ್ಯ ಡಾ.ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನಾತ್ಮಕ ವಾದಂತಹ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು ನಾವು ಇಂದಿನ ಈ ಕಾರ್ಯಕ್ರಮ ನಮ್ಮ ನಿಮ್ಮೆಲ್ಲರ ಸಿಂಧನೂರಿನ ಕರುಣಾಮಯಿ ಕಾರುಣ್ಯ ಕುಟುಂಬದ ಆಚರಿಸುವ ಮೂಲಕ ಈ ಮಹಾತ್ಮರು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಂಶಗಳನ್ನು ತಿಳಿಸಿ ಇಲ್ಲಿರುವಂತ ಜೀವಿಗಳಿಗೆ ಸಹ ಸ್ವಾತಂತ್ರ್ಯದ ಅರಿವು ಮೂಡಿಸುವ ಉದ್ದೇಶ ನಮ್ಮದು ಎಂದು ಮಾತನಾಡಿದರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಡಾ. ನಾಗವೇಣಿ ಎಸ್ ಪಾಟೀಲ್ ಸಿಂಧನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಿದ್ದುಹೂಗಾರ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸಂಘಟನೆಯ ತಾಲೂಕ ಅಧ್ಯಕ್ಷರಾದ ಸುರೇಶ ಸಿದ್ದಾಪುರ. ಕಾರುಣ್ಯ ಆಶ್ರಮದ ಆಡಳಿತ ಅಧಿಕಾರಿಗಳಾದ ಡಾ.ಚನ್ನಬಸವ ಸ್ವಾಮಿ ಹಿರೇಮಠ. ಮೇಲ್ವಿಚಾರಕರಾದ ಸುಜಾತ ಹಿರೇಮಠ. ಸಿಬ್ಬಂದಿಗಳಾದ ಮರಿಯಪ್ಪ ಕರಿಯಪ್ಪ ಅನೇಕರು ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.