ಹನೂರು :ಪಟ್ಟಣ ಪಂಚಾಯಿತಿ ಸಹಯೋಗದೊಂದಿಗೆ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಸ್ವಚ್ಛತಾ ಜಾಥಾ
ಕಾರ್ಯಕ್ರಮಕ್ಕೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಗಿರೀಶ್ ಕುಮಾರ್ ಹಾಗೂ ನಾಮನಿರ್ದೇಶಿತ ಸದಸ್ಯ ಪುಟ್ಟರಾಜು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಸ್ವಚ್ಛತೆ ಕುರಿತು ಅರಿವು ಮೂಡಿಸಲಾಯಿತು.
ಈ ವೇಳೆ ಚಾಮರಾಜನಗರ ಗ್ರೀನ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಕಾರ್ಯದರ್ಶಿ ಮಾದೇವಸ್ವಾಮಿ ಮಾತನಾಡಿ, ಸಾರ್ವಜನಿಕರು ಮೂಲದಲ್ಲಿ ಕಸವನ್ನು ಬೇರ್ಪಡಿಸಿ, ಪ್ಲಾಸ್ಟಿಕ್ ತ್ಯಜಿಸಿ, ಬಯಲು ಶೌಚ ತ್ಯಜಿಸುವುದು ಸೇರಿದಂತೆ ಇನ್ನಿತರೆ ಸ್ವಚ್ಛತಾ ಕಾರ್ಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಪಟ್ಟಣದ ಗೌತಮ ಶಿಕ್ಷಣ ಸಂಸ್ಥೆ, ಬಿ.ಎಂ.ಜಿ.ಪ್ರೌಢಶಾಲೆ, ಉನ್ನತೀಕರಿಸಿದ ಸರ್ಕಾರಿ ಶಾಲೆ ವಿದ್ಯಾರ್ಥಿಗಳು ಶಿಕ್ಷಕರು ಸ್ವಚ್ಛತಾ ಜಾಥಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳು ಸ್ವಚ್ಛತೆಯ ಅರಿವನ್ನು ಸಾರುವ ಸ್ಲೋಗನ್ ಗಳನ್ನು ಹಿಡಿದು ಪಟ್ಟಣದ ವಿವಿಧ ವಾರ್ಡುಗಳಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಅರಿವು ಮೂಡಿಸಿದರು.
ಈ ಸಂದರ್ಭದಲ್ಲಿ ಗ್ರೀನ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಚಾಮರಾಜನಗರ ನಿರ್ದೇಶಕ ಪ್ರಭುಸ್ವಾಮಿ, ಪಟ್ಟಣ ಪಂಚಾಯತಿ ಸಿಬ್ಬಂದಿ ವರ್ಗದವರು, ಗೌತಮ್ ಶಾಲೆಯ ಮುಖ್ಯ ಶಿಕ್ಷಕರಾದ ನಿಂಗರಾಜು, ಸಹಶಿಕ್ಷಕರಾದ ವೆಂಕಟೇಶ್, ಯೋಗೇಶ್, ಉನ್ನತಿಕರಿಸಿದ ಸರ್ಕಾರಿ ಶಾಲೆಯ ಚಿತ್ರಕಲಾ ಶಿಕ್ಷಕ ರಾಜು, ದೈಹಿಕ ಶಿಕ್ಷಕ ಧರ್ಮಲಿಂಗಂ, ಬಿ.ಎಂ.ಜಿ. ಪ್ರೌಢಶಾಲೆಯ ಮುಖ್ಯ ಶಿಕ್ಷಕ ಗುರುಮೂರ್ತಿ, ಶಿಕ್ಷಕ ಪ್ರೇಮ್ ಕುಮಾರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ :ಉಸ್ಮಾನ್ ಖಾನ್.