ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಾಂಶುಪಾಲರ ಮೇಲೆ ಕೊಲೆ ಆರೋಪ


ರಾಯಚೂರು ಜಿಲ್ಲೆಯ ಲಿಂಗಸುಗೂರು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿ ಕೊಂದು ಹಾಸ್ಟೆಲ್​ ಕೊಠಡಿಯಲ್ಲಿ ನೇಣಿಗೆ ಹಾಕಿರುವ ಘಟನೆ ಜಿಲ್ಲೆಯ ಲಿಂಗಸುಗೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ PU ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಐಶ್ವರ್ಯ (17) ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಕಾಲೇಜಿನ ಪ್ರಾಂಶುಪಾಲ ರಮೇಶ್ ಎಂಬಾತನೆ ಕೊಲೆ ಮಾಡಿ ತನ್ನ ವಿರುದ್ಧ ಆರೋಪ ಬರದಂತೆ ಹಾಸ್ಟೆಲ್​ ಕೊಠಡಿಯಲ್ಲಿ ನೇಣಿಗೆ ಹಾಕಿದ್ದಾರೆ ಎಂದು ಮೃತ ವಿದ್ಯಾರ್ಥಿನಿ ಫೋಷಕರು, ಸಂಬಂಧಿಕರು ಆರೋಪಿಸಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಸಂಜೆ ನಡೆದಿರೋ ಘಟನೆ ಇದಾಗಿದ್ದು,ಪ್ರಥಮ PU ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ, ವಿಸಿಬಿ ಶಿಕ್ಷಣ ಸಂಸ್ಥೆ ಹಾಸ್ಟೆಲ್​ನಲ್ಲಿ ವಾಸವಿದ್ದಳು. ಆಗಾಗ ಪ್ರಿನ್ಸಿಪಾಲ್ ತನ್ನ ರೂಮ್​ಗೆ ಕರೆಸಿಕೊಳ್ಳುತ್ತಿದ್ದನಂತೆ ಹೀಗಾಗಿ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿ ಪ್ರಾಂಶುಪಾಲರೇ ಕೊಂದು ನೇಣು ಹಾಕಿದ್ದಾರೆ ಎಂದು ಆರೋಪ ಮಾಡಿ ವಸತಿ ಕಾಲೇಜಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಾಂಶುಪಾಲ ರಮೇಶ್ ಮೇಲೆ ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ವರದಿ :ರವಿಕುಮಾರ್ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ