ಹಾವೇರಿ:ಸಿಎಂ ಕ್ಷೇತ್ರವಾದ ತವರು ಜಿಲ್ಲೆಯಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆ ಕಾಮನ್ ಮ್ಯಾನ್ ಎಂದೇ ಕರೆಸಿಕೊಳ್ಳುವ ಸಿಎಂ ಕ್ಷೇತ್ರವಾದ ಶಿಗ್ಗಾoವ ತಾಲೂಕಿನಲ್ಲಿ ಸುಮಾರು 91 ಹಳ್ಳಿಗಳು 5 ಲಕ್ಷ ಜನಸಂಖ್ಯೆ ಇದ್ದು ಈ ಎಲ್ಲ ಗ್ರಾಮಗಳಿಗೆ ಕೇವಲ 22 ಗ್ರಾಮ ಲೆಕ್ಕಾಧಿಕಾರಿಗಳು ಮಾತ್ರ ಕಾರ್ಯ ನಿರ್ವಹಿಸುತ್ತಿದ್ದು ಈ ಕ್ಷೇತ್ರದಲ್ಲಿ 40 ಗ್ರಾಮ ಲೆಕ್ಕಾಧಿಕಾರಿಗಳ ಪೋಸ್ಟ್ ಇದ್ದು ಇದರಲ್ಲಿ ಕೇವಲ 35 ಜನ ಗ್ರಾಮ ಲೆಕ್ಕಾಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದು ಇದರಲ್ಲಿ 22 ಜನ ಮಾತ್ರ 91 ಗ್ರಾಮಗಳಿಗೆ ಹಾಗೂ ಅಲ್ಲಿರುವ ಸಾರ್ವಜನಿಕರಿಗೆ ಸೇವೆಯನ್ನ ನೀಡುತ್ತಿರುವುದು ಕಂಡುಬಂದಿರುತ್ತದೆ ಇದರಿಂದ ಗ್ರಾಮ ಲೆಕ್ಕಾಧಿಕಾರಿಗಳಿಗೆ ಹೆಚ್ಚಿನ ಕೆಲಸದ ಒತ್ತಡದಿಂದ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿದ್ದು ಹಾಗೂ ಒಬ್ಬ ಗ್ರಾಮ ಲೆಕ್ಕಾಧಿಕಾರಿಗಳಿಗೆ 5 ಹಳ್ಳಿಗಳಿದ್ದು ಇದರಿಂದ ಗ್ರಾಮ ಲೆಕ್ಕಾಧಿಕಾರಿಗಳು ಒಂದು ಹಳ್ಳಿಯಲ್ಲೇ ಇರದೆ ಬೇರೆ ಬೇರೆ ಹಳ್ಳಿಗಳಲ್ಲಿ ಅಲೆದಾಡುತ್ತಿರುವುದರಿಂದ ಹಾಗೂ ಚುನಾವಣೆ ಹತ್ತಿರ ಇರುವುದರಿಂದ ಚುನಾವಣಾ ಕೆಲಸವು ತೀವ್ರ ಗತಿಯಲ್ಲಿ ಸಾಗುತ್ತಿರುವುದರಿಂದ ಸಾರ್ವಜನಿಕರ ದಿನನಿತ್ಯದ ಕೆಲಸಗಳಿಗೆ ತುಂಬಾ ಸಮಸ್ಯೆ ಆಗುತ್ತಿದ್ದು ಇದರಿಂದ ಸಾರ್ವಜನಿಕರು ಕಂದಾಯ ಇಲಾಖೆಯ ಮೇಲೆ ತುಂಬಾ ಬೇಸರ ವ್ಯಕ್ತಪಡಿಸುತ್ತಿದ್ದಾರೆ ಆದ್ದರಿಂದ ಆದಷ್ಟು ಬೇಗ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮ್ಮ ತವರು ಕ್ಷೇತ್ರವಾದ ಶಿಗ್ಗಾoವ ತಾಲೂಕಿನಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ ಕೊರತೆಯನ್ನು ನೀಗಿಸಿ ಸಾರ್ವಜನಿಕರ ದಿನನಿತ್ಯದ ಕೆಲಸಗಳಿಗೆ ಅನುಕೂಲ ಮಾಡಿಕೊಡುವವರೇ ಎಂಬುದು ಯಕ್ಷಪ್ರಶ್ನೆಯಾಗಿದೆ ಎಲ್ಲದಕ್ಕೂ ಕಾಲವೇ ಉತ್ತರ ನೀಡಬೇಕು ಕಾದು ನೋಡಬೇಕು ಅಷ್ಟೇ…
-ಕರುನಾಡ ಕಂದ