ಬೆಳಗಾವಿ : ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಆರಾಧ್ಯ ಶಕ್ತಿ ದೇವತೆ ಚಿಂಚಲಿ ಮಾಯಕ್ಕಾದೇವಿ.ಭಾರತ ಹುಣ್ಣಿಮೆ ನಂತರ ಬರುವ ಹಸ್ತಾ ನಕ್ಷತ್ರದ ಶುಭಗಳಿಗೆಯಲ್ಲಿ ಜರಗುವ ಜಾತ್ರೆ ಇದಾಗಿದ್ದು ಉತ್ತರ ಕರ್ನಾಟಕದಲ್ಲಿಯೇ ಇದೊಂದು ದೊಡ್ಡ ಜಾತ್ರೆ ಎಂದು ಖ್ಯಾತಿ ಪಡೆದಿದೆ.
ಮಾಯಕ್ಕ ದೇವಿ ಜಾತ್ರೆಗೆ ಸುಮಾರು 3 ಲಕ್ಷಕ್ಕಿಂತ ಹೆಚ್ಚು ಭಕ್ತರು ನೆರೆಯ ಮಹಾರಾಷ್ಟ್ರ, ಗೋವಾ, ತಮಿಳನಾಡು, ಆಂದ್ರಪ್ರದೇಶದ, ತೆಲಂಗಾಣ ಹೀಗೆ ಇತರ ರಾಜ್ಯಗಳಿಂದ ಭಕ್ತರು ಆಗಮಿಸುತ್ತಾರೆ. ಈ ದೇವಿಗೆ ಮಹಾಕಾರತಿ, ಮಹಾಕಾಳಿ, ಮಾಯವ್ವಾ ಎಂಬೆಲ್ಲ ಹೆಸರಿನಿಂದ ಪೂಜಿಸಲ್ಪಡುವ ಮಾಯಕ್ಕಾ ದೇವಿಯ ಜಾತ್ರೆಗೆ ಚಿಂಚಲಿ ಗ್ರಾಮ ಸಜ್ಜಾಗಿದೆ. ಮಾಯಕ್ಕಾ ದೇವಿಯು ಮಹಾರಾಷ್ಟ್ರದ ಮಾನದೇಶ (ಕೊಂಕಣ) ದಿಂದ ಬಂದವಳು ಎಂದು ಹೇಳುತ್ತಾರೆ. ಕೀಲ ಮತ್ತು ಕಟ್ಟರೆಂಬ ರಾಕ್ಷಸರನ್ನು ಬೆನಟ್ಟಿ ಬಂದು ಚಿಂಚಲಿಯಲ್ಲಿ ಅವರನ್ನು ಸಂಹರಿಸಿ ಅಲ್ಲಿಯೇ ನೆಲೆಯೂರಿದ್ದಾಳೆಂದು ಐತಿಹಾಸಿಕ ಕಥೆಗಳು ಹೇಳುತ್ತವೆ. ಭಕ್ತರು ಕೈಯಲ್ಲಿ ಬೆತ್ತದ ಕೋಲು ಹಿಡಿದು ವೀರಾವೇಶದಿಂದ ಕುಣಿಯುತ್ತಾರೆ .
ಹಿರಿಯರ ಪ್ರಕಾರ ಚಿಂಚಲಿಯಲ್ಲಿ ಹಿರಿದೇವಿ ಮೂಲ ದೇವತೆ. ಇವಳೇ ಗ್ರಾಮ ದೇವತೆ ಮಾಯಕ್ಕಾದೇವಿ ಹಿರಿದೇವಿಯ ಆಶ್ರಯ ಪಡೆದು ಚಿಂಚಲಿಯಲ್ಲಿ ನೆಲೆಸಿದಳು ಅದಕ್ಕಾಗಿ ಮೊದಲ ಪ್ರಾಶಸ್ತ್ಯ ಹಿರಿದೇವಿಗೆ ಸಲ್ಲುತ್ತದೆ ಈಗಲೂ ಮೊದಲು ಹಿರಿದೇವಿ ದರ್ಶನ ಮಾಡಿ ನೈವೇದ್ಯ ಸಲ್ಲಿಸಿ ನಂತರ ಮಾಯಕ್ಕಾದೇವಿಗೆ ನೈವೇದ್ಯ ಸಲ್ಲಿಸುತ್ತಾರೆ ಭಕ್ತರು ಸುಮಾರು ನೂರು ವರ್ಷಗಳಿಂದ ದೇವರ ದರ್ಶನಕ್ಕೆ ಎತ್ತಿನ ಬಂಡಿಯಲ್ಲಿ ಬಂದು ದೇವರಿಗೆ ನೈವೇದ್ಯ ತೊರಿಸುವುದು ವಾಡಿಕೆ.
21 ಶತಮಾನದಲ್ಲೂ ಕೂಡಾ ಅಪಾರ ಸಂಖ್ಯೆಯಲ್ಲಿ ಮಹಾರಾಷ್ಟ್ರದಿಂದ ಅಪಾರ ಭಕ್ತರು ಎತ್ತಿನ ಗಾಡಿಯ ಮೂಲಕ ಹಾಡುತ್ತಾ ಕುಣಿಯತ್ತಾ ದೇವಿಯ ದರ್ಶನ ಪಡೆಯಲು ಬರುತ್ತಾರೆ ಭಕ್ತರು. ಹಿರಿಯರು ರೂಢಿಸಿರುವ ವಾಡಿಕೆಯಂತೆ ತೆಲೆಮಾರುಗಳಿಂದ ಬಂದಿರುವಂತ ಆಚರಣೆ ಭಕ್ತಿಯನ್ನು ಬಿಡದೆ ಪ್ರತಿ ವರ್ಷ ಭಾರತ ಹುಣಿಮೆ ನಂತರ ಬರುವ ಹಸ್ತಾ ಶುಭಗಳಿಗೆಯಲ್ಲಿ ಬಂದು ದೇವಿಯ ದರ್ಶನ ಪಡೆಯುತ್ತಾರೆ ಗಡಿಭಾಗದ ಭಕ್ತರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.