ಹನೂರು : ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡ ಹಿರಿಯ ಕಾಂಗ್ರೆಸ್ ಮುಖಂಡ ಮುಕುಂದ ವರ್ಮಾ.
ಕಳೆದ 8 ವರ್ಷಗಳಿಂದ ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಇಕ್ಕಡಹಳ್ಳಿ ಕೆಂಪಯ್ಯನವರು ಕರೋನ ಮಹಾಮಾರಿಗೆ ಮೃತಪಟ್ಟಿದ್ದರು. ಇವರಿಂದ ತೆರವಾದ ಸ್ಥಾನಕ್ಕೆ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಡಿ ದೇವರಾಜ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಇವರು ಅಧ್ಯಕ್ಷರಾದ ಮೂರು ತಿಂಗಳಿಗೆ ತಮ್ಮ ಸ್ವಗ್ರಾಮದ ಸಮೀಪವೆ ನಡೆದ ಅಪಘಾತದಲ್ಲಿ ಇವರು ಮೃತಪಟ್ಟಿದ್ದರು.
ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಇರುವುದರಿಂದ ಪಕ್ಷ ಸಂಘಟನೆಗೆ ಹಾಗೂ ಪಕ್ಷದ ಕಾರ್ಯಕ್ರಮಗಳಿಗೆ ಹಿನ್ನಡೆಯಾಗಿತ್ತು. ಈ ಹಿನ್ನೆಲೆ ಸತ್ತೇಗಾಲದ ಮುಕುಂದ ವರ್ಮಾ ರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
ಇವರು ಬೆಂಗಳೂರಿನ ಕೃಷಿ ವಿಶ್ವವಿದ್ಯಾನಿಲಯದಲ್ಲಿ ಬಿ ಎಸ್ ಸಿ ಡೈರಿ ಟೆಕ್ ಡಿಎಂಎಂ ಪದವಿ ಪಡೆದಿದ್ದು ವಿದ್ಯಾರ್ಥಿ ದೆಸೆಯಿಂದಲೇ 1985 ರಿಂದ ಎನ್ ಎಸ್ ಯು ಐ ಯುವ ಕಾಂಗ್ರೆಸ್ ಘಟಕಗಳಲ್ಲಿ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ ಕೆಪಿಸಿಸಿ ಶಿಕ್ಷಕರ ಮತ್ತು ಪದವೀಧರರ ಘಟಕದ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. 1986-87 ಎರಡನೇ ಸಾಲಿನಲ್ಲಿ ಸಲೀಂ ಅಹಮದ್ ರಾಜ್ಯ ಎನ್ಎಸ್ ಯು ಐ ವಿದ್ಯಾರ್ಥಿ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿಎನ್ ಎಸ್ ಯು ಐ ಉಪಾಧ್ಯಕ್ಷನಾಗಿ ನೇಮಕಗೊಂಡು ವಿದ್ಯಾರ್ಥಿಗಳನ್ನು ಸಂಘಟಿಸಿ ಪಕ್ಷಕ್ಕಾಗಿ ದುಡಿದಿದ್ದಾರೆ, ಈ ನಿಟ್ಟಿನಲ್ಲಿ ಪಕ್ಷದ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ನೂತನ ಅಧ್ಯಕ್ಷ ಮುಕುಂದ ವರ್ಮ ಮಾತನಾಡಿ ಶಾಸಕರಾದ ಆರ್ ನರೇಂದ್ರ ರವರು ಹಾಗೂ ಜಿಲ್ಲಾಧ್ಯಕ್ಷರಾದ ಮರಿಸ್ವಾಮಿ ರವರು ಹನೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿ ನನಗೆ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಚುನಾವಣೆ ಹತ್ತಿರವಿರುವುದರಿಂದ ಪಕ್ಷವನ್ನು ಉತ್ತಮವಾಗಿ ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಹಗಲಿರುಳು ಶ್ರಮಿಸುತ್ತೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಡಿಸಿಸಿ ಅಧ್ಯಕ್ಷ ಮರಿಸ್ವಾಮಿ, ರಾಮಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್, ಜಿ ಪಂ ಮಾಜಿ ಉಪಾಧ್ಯಕ್ಷ ಬಸವರಾಜು, ತಾಪಂ ಮಾಜಿ ಅಧ್ಯಕ್ಷ ಮುರುಡೇಶ್ವರ ಸ್ವಾಮಿ, ಪ್ರಚಾರ ಸಮಿತಿ ಅಧ್ಯಕ್ಷ ಶಿವಕುಮಾರ್ ಯುವ ಮುಖಂಡ ಎಲ್. ನಾಗೇಂದ್ರ ಸೇರಿದಂತೆ ಇನ್ನಿತರರು ಹಾಜರಿದ್ದರು.
ವರದಿ :ಉಸ್ಮಾನ್ ಖಾನ್