ತಿಪಟೂರು-ಪ್ರಾಥಮಿಕ ಕೃಷಿ ಸಹಕಾರ ಸಂಘಗಳು ಗ್ರಾಮೀಣ ಜನರ ಜೀವನದೊಂದಿಗೆ ಬೆರೆತಿದ್ದು ಅವರ ಪ್ರತಿನಿತ್ಯದ ಕಾರ್ಯ ಚಟುವಟಿಕೆಗಳಲ್ಲಿ ಒಂದಲ್ಲ ಒಂದು ರೀತಿಯ ಭಾಗವಾಗಿದೆ ಎಂದು ತುಮಕೂರು ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಮಾಜಿ ಶಾಸಕರಾದ ಶ್ರೀ ಕೆ ಷಡಕ್ಷರಿಯವರು ತಿಳಿಸಿದರು.
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ಜಿಲ್ಲಾಮಟ್ಟದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಷಡಕ್ಷರಿ ಅವರು ಸಹಕಾರ ಸಂಘಗಳನ್ನು ಬಲಪಡಿಸುವ ಮೂಲಕ ರೈತರ ಆರ್ಥಿಕ ಸ್ಥಿತಿಯನ್ನು ಉತ್ತಮಪಡಿಸಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಯೂನಿಯನ್ನಿನ ಅಧ್ಯಕ್ಷರಾದ ವೆಂಕಟೇಗೌಡ ಮಾತನಾಡಿ ಸಹಕಾರಿ ಸಂಘಗಳಲ್ಲಿ ಸಮಯಕ್ಕೆ ಸರಿಯಾಗಿ ಲೆಕ್ಕಪರಿಶೋಧನೆ ಮಾಡುವ ಮೂಲಕ ಪಾರದರ್ಶಕ ವ್ಯವಹಾರ ನಡೆಸಬೇಕೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಶಶಿಧರ ಎಲೆ,ನಿವೃತ್ತ ಜಂಟಿ ನಿಬಂಧಕರು ಸಹಕಾರ ಇಲಾಖೆ ರವರು ಇತ್ತೀಚಿನ ಕಾನೂನು ತಿದ್ದುಪಡಿ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಸಹಕಾರ ಯೂನಿಯನ್ ನಿರ್ದೇಶಕರಾದ ರಾಜಶೇಖರಯ್ಯ,ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ವ್ಯವಸ್ಥಾಪಕರಾದ ಪ್ರವೀಣ್ ಕುಮಾರ್, ಮೇಲ್ವಿಚಾರಕರಾದ ಟಿ.ಪಿ.ಉಮಾಶಂಕರ್, ಸಹಕಾರ ಯೂನಿಯನ್ ಸಿಇಓ ಮಹಾಂತೇಶ್ ಹಿರೇಮಠ್, ವ್ಯವಸ್ಥಾಪಕ ದಯಾನಂದ್ ಹಾಗೂ ತಿಪಟೂರು ತಾಲೂಕಿನ ಕೃಷಿ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ವೇಣುಗೋಪಾಲ್ ಸ್ವಾಗತಿಸಿ ಕರಡಿ ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಿಇಓ ಮನು ಎಸ್ಎಂ ನಿರೂಪಿಸಿದರು.
ವರದಿ:ಮನು ಸಿಡ್ಲೇಹಳ್ಳಿ