ಧಾರವಾಡ : ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರು ಇವರು ಪ್ರಕಟಿಸಿದ ದಲಿತ ವಿದ್ಯಾರ್ಥಿ ಪರಿಷತ್ ನಡೆಸುತ್ತಿರುವ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಗೆ ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿ ಬರುವ ಎಲ್ಲಾ ವಸತಿ ನಿಲಯಗಳಲ್ಲಿರುವ ಎಲ್ಲಾ ಸಮುದಾಯದ ವಿದ್ಯಾರ್ಥಿಗಳು ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವ ಮೂಲಕ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಲು ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಮೂಲಕ ಎಲ್ಲಾ ನಿಲಯ ಪಾಲಕರಿಗೆ ತಲುಪಿಸಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿಗೆ ಸಹಕರಿಸುವಂತೆ ಆಯುಕ್ತರ ನೋಟೀಸ್ ಅನ್ನು ಧಾರವಾಡ ತಾಲೂಕ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಗಮನಕ್ಕೆ ತಂದು ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆಯ ಪೋಸ್ಟರ್ ಅನ್ನು ಬಿಡುಗಡೆಗೊಳಿಸಲಾಯಿತು ಈ ವೇಳೆ ಜಿಲ್ಲಾ ಸಂಚಾಲಕರು ಹನುಮಂತ ದಾಸರ,ಬಿಜೆಪಿ ಯುವ ಮೋರ್ಚಾದ ಯಾದಗಿರಿ ಜಿಲ್ಲಾ ಉಪಾಧ್ಯಕ್ಷರಾದ ಸುರೇಶ್ ಕೋರಿ,ಯುವ ನ್ಯಾಯವಾದಿಗಳಾದ ವಿಜಯ್ ಯಾದವ್ ಹಾಗೂ ಪದಾಧಿಕಾರಿಗಳು ಭಾಗಿಯಾಗಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.