ಯಾದಗಿರಿ ಜಿಲ್ಲೆಯ ಗುರಮಿಟಕಲ್ ತಾಲೂಕಿನ ಅನುಪುರ ಗ್ರಾಮದ ಜನರು ಕಲುಷಿತ ನೀರು ಸೇವನೆ ಇಬ್ಬರು ಮಹಿಳೆಯಾರು ಸಾವು 40ಕ್ಕೂ ಹೆಚ್ಚು ಜನ ಅಸ್ವಸ್ಥ
ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯಾರು ಸಾವುನ್ನಪ್ಪಿದ್ದು, 40ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡಿರುವ ಘಟನೆ ಅನಪುರ ಗ್ರಾಮದಲ್ಲಿ ಜರುಗಿದೆ.
ಗ್ರಾಮಕ್ಕೆ ನೀರು ಪೂರೈಸುವ ಪೈಪ್ ನಲ್ಲಿ ಚರಂಡಿ ನೀರು ಸೇರ್ಪಡೆಯಾಗಿದ್ದು, ಹೀಗಾಗಿ ಜನರಲ್ಲಿ ವಾಂತಿ ಬೇದಿ ಕಾಣಿಸಿಕೊಂಡಿದ್ದು. 40 ಜನರು ಹೆಚ್ಚು ಅಸ್ತವ್ಯಸ್ಥಗೊಂಡಿದ್ದಾರೆ.
ಕಲುಷಿತ ನೀರು ಸೇವನೆ ಪರಿಣಾಮ ಗ್ರಾಮದಲ್ಲಿ ವಾಂತಿ, ಭೇದಿ ಉಲ್ಬಣಗೊಂಡಿದೆ ಇದಕ್ಕೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದಾಗಿ ಎಂದು ಗ್ರಾಮಸ್ಥರು ಹೇಳುತ್ತಾರೆ.
ವಾಂತಿ ಬೇಧಿಯಿಂದ ಬಳಲುತ್ತಿದ್ದವರಿಗೆ ಮಂಗಳವಾರ ತಡ ರಾತ್ರಿ ತೆಲಂಗಾಣದ ನಾರಾಯಣಪೇಟೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಇಂದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಸಾವಿತ್ರಮ್ಮ 35 ವರ್ಷ ಮತ್ತು ಸಾಯಮ್ಮ 70 ವರ್ಷ ಇಬ್ಬರು ಹೆಣ್ಣು ಮಕ್ಕಳು ಸಾವನ್ನಪ್ಪಿದ್ದಾರೆ.
ಮೊನ್ನೆಚ್ಚರಿಕೆ ಕ್ರಮವಾಗಿ ಗ್ರಾಮದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ವೈದ್ಯರ ತಂಡ ಗ್ರಾಮದಲ್ಲಿ ಬಿಡಾರ ಹೂಡಿದ್ದಾರೆ.
ವಾಂತಿ ಭೇದಿಯಿಂದ ಬಳಲುತ್ತಿದ್ದ ಹತ್ತು ಜನರನ್ನು ತೆಲಂಗಾಣದ ನಾರಾಯಣಪೇಟ್ ಖಾಸಗಿ ಆಸ್ಪತ್ರೆಗೆ ಹಾಗೂ ಇನ್ನು 13 ಜನರನ್ನು ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ