ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಆಗಮಿಸಿದ ಹಿನ್ನೆಲೆ ಕ್ಷೇತ್ರದ ಜೆಡಿಎಸ್ ಕಾರ್ಯಕರ್ತರು ಸಂಭ್ರಮದಿಂದ ಸ್ವಾಗತಿಸಿ ಅಭಿಮಾನ ವ್ಯಕ್ತಪಡಿಸಿದರು.

ಹನೂರು ಪಟ್ಟಣಕ್ಕೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಅವರನ್ನು ಜೆಡಿಎಸ್ ಅಭ್ಯರ್ಥಿ ಎಂ.ಆರ್.ಮಂಜುನಾಥ್ ಅವರ ನೇತೃತ್ವದಲ್ಲಿ ಕಾರ್ಯಕರ್ತರು ಹಾರ ಹಾಕಿ ಸ್ವಾಗತಿಸಿದರು.

ಜೆಡಿಎಸ್ ಕಾರ್ಯಕರ್ತ ಮುಖಂಡರುಗಳು ಖಾಸಗಿ ಬಸ್ ನಿಲ್ದಾಣದ ಬಳಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಸಿಬಿ ಯಂತ್ರದ ಮೇಲಿಂದ ಹೂವನ್ನು ಹಾಕಿ ಪಟಾಕಿ ಸಿಡಿಸಿ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಿ ಸಂಭ್ರಮಿಸಿ ಜೈಕಾರ ಘೋಷಣೆಗಳನ್ನು ಕೂಗುತ್ತ ಅಭಿಮಾನಿ ವ್ಯಕ್ತಪಡಿಸಿದರು.

ಇದೇವೇಳೆ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ ರಾಷ್ಟ್ರೀಯ ಪಕ್ಷಗಳನ್ನು ಹೊರತುಪಡಿಸಿ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನ ಮುಖ್ಯಮಂತ್ರಿಯನ್ನು ಮಾಡಬೇಕು ಈ ನಿಟ್ಟಿನಲ್ಲಿ ಹನೂರು ವಿಧಾನಸಭಾ ಕ್ಷೇತ್ರದಲ್ಲೂ ಸಹ ಮಂಜುನಾಥ್ ಅವರನ್ನು ಗೆಲ್ಲಿಸಿ ಕ್ಷೇತ್ರದ ಅಭಿವೃದ್ಧಿಗೆ ಅವಕಾಶ ಮಾಡಿಕೊಡಬೇಕು.

ಸನ್ಮಾನ್ಯ ಎಚ್.ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 14 ತಿಂಗಳಲ್ಲಿ 24,000 ಕೋಟಿ  ರೈತರ ಸಾಲವನ್ನು ಮನ್ನಾ ಮಾಡಿ ರೈತರ ಅಭಿವೃದ್ಧಿ ಹೇಳಿಗಾಗಿ ಶ್ರಮಿಸಿದ್ದಾರೆ. ಮಹಿಳೆಯರು ಯುವಕರ ಶ್ರೇಯೋಭಿವೃದ್ಧಿಗೆ ಹಲವಾರು ಯೋಜನೆಗಳನ್ನು ನೀಡಿ ಉತ್ತಮ ಆಡಳಿತವನ್ನು ನಡೆಸಿದ್ದಾರೆ.

ಹನೂರು ವಿಧಾನಸಭಾ ಕ್ಷೇತ್ರ ಗುಡ್ಡಗಾಡು ಪ್ರದೇಶವಾಗಿರುವುದರಿಂದ ಇಲ್ಲಿಗೆ ನೀರಾವರಿ ಸೌಲಭ್ಯವನ್ನು ಕಲ್ಪಿಸುವ ಯೋಜನೆಯನ್ನು ಮಾಡಲಾಗುತ್ತದೆ.ಯುವಕ ಯುವತಿಯರು ಕೆಲಸ ಕಾರ್ಯಗಳಿಲ್ಲದೆ ಹೊಲಸೆ ಹೋಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಇಲ್ಲಿ ಕಾರ್ಖಾನೆಗಳನ್ನು ತೆರೆದು ನಿರುದ್ಯೋಗ ಯುವಕ ಯುವತಿಯರಿಗೆ ಕೆಲಸ ನೀಡುವಂತಹ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ.

ರಾಮನಗರ ಕ್ಷೇತ್ರ ಹೇಗಿದೆಯೋ ಹಾಗೆ ಹನೂರು ಕ್ಷೇತ್ರಕ್ಕೂ ಹೆಚ್ಚಿನ ಅನುದಾನವನ್ನು ತಂದು ಅಭಿವೃದ್ಧಿಯನ್ನು ಮಾಡಲಾಗುವುದು,

ಎಂದರು ನಂತರ ಮಾತನಾಡಿದ ಹನೂರು ಜೆ.ಡಿಎಸ್ ಅಭ್ಯರ್ಥಿ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ರೈತರ ಅಭಿವೃದ್ಧಿ ಆಗಬೇಕಾದರೆ ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಬೇಕು. ಪಂಚರತ್ನ ಯಾತ್ರೆಯಲ್ಲಿ ಯಾವ ಯಾರು ಸಾಲಗಾರರಾಗಬಾರದು ಎಂದು ಒಂದು ಎಕರೆಗೆ 10 ಸಾವಿರ ಸಹಾಯಧನವನ್ನು ನೀಡಲಾಗುತ್ತಿದೆ ಅಂತೆ ಇನ್ನೂ ಹಲವಾರು ಯೋಜನೆಗಳನ್ನು ನೀಡಲಾಗುವುದು.

ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕುಂಠಿತವಾಗಿದೆ. ಸರಿಯಾದ ಆರೋಗ್ಯ ಸೌಲಭ್ಯ ಸಿಗುತ್ತಿಲ್ಲ. ನಿರುದ್ಯೋಗ ಯುವಕ ಯುವತಿಯರಿಗೆ ಕೆಲಸವಿಲ್ಲದೆ ವಲಸೆ ಹೋಗುತ್ತಾರೆ ರೈತರು ಬೆಳೆದಂತಹ ಬೆಳೆಗೆ ಸರಿಯಾದ ಬೆಂಬಲ ಬೆಲೆ ಸಿಗುತ್ತಿಲ್ಲ ಇದರಿಂದ ಕ್ಷೇತ್ರದ ಜನರು ಬದಲಾವಣೆ ಬಯಸುತ್ತಿದ್ದಾರೆ ಈ ಬಾರಿಯ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಡಿ ಕ್ಷೇತ್ರದ ಅಭಿವೃದ್ಧಿಗೆ ನಿರುದ್ಯೋಗ ಯುವಕ ಯುವತಿಯರಿಗಾಗಿ ರೈತರಿಗಾಗಿ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂ.ಸದಸ್ಯ ಆನಂದ್, ಉದ್ಯಮಿ ರಾಜುಗೌಡ,ಉದ್ದನೂರು ಪ್ರಸಾದ್, ಚಿಂಚಳ್ಳಿ ಗುರುಮಲ್ಲಪ್ಪ,ಶಾಗ್ಯ ಬಾಬು,ಸತ್ಯಗಾಲ ಮಂಜೇಶ್ ಸೇರಿದಂತೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿ ಬಳಗ ಹಾಗೂ  ಎಂ.ಆರ್.ಮಂಜುನಾಥ್ ಅಭಿಮಾನಿ ಬಳಗ ಹಾಗೂ ಜೆಡಿಎಸ್ ಕಾರ್ಯಕರ್ತ ಮುಖಂಡರುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ