ವಿಜಯನಗರ:ಇತ್ತೀಚಿಗೆ ಮಂಡ್ಯದಲ್ಲಿ ಸಿದ್ದರಾಮಯ್ಯ ಅವರನ್ನು ಕುರಿತು ಮಾತಿನ ಭರದಲ್ಲಿ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ರವರ ಹೇಳಿಕೆಯನ್ನು ವಿಜಯನಗರ ಜಿಲ್ಲಾ ಯುವ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿಯಾದ ಗಂಗಜ್ಜಿ ನಾಗರಾಜ್ ಅವರು ಖಂಡಿಸಿದ್ದಾರೆ.
ಕಳೆದ ಸೋಮವಾರ ಮಂಡ್ಯದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮವೊಂದರಲ್ಲಿ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಅವರು ಜವಾಬ್ದಾರಿಯುತ ಸ್ಥಾನದಲ್ಲಿ ಇದ್ದುಕೊಂಡು ಈ ರೀತಿ ಜನರನ್ನು ಪ್ರಚೋದಿಸುವ ಹೇಳಿಕೆ ನೀಡಿರುವುದು ಖಂಡನೀಯ.
ಟಿಪ್ಪುಸುಲ್ತಾನ್ ನಂತೆ ಹೊಡೆದು ಹಾಕಿ ಎಂಬ ಹೇಳಿಕೆಯು ಸಿದ್ದರಾಮಯ್ಯ ಅವರ ಅಭಿಮಾನಿಗಳ ಹಾಗೂ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ ಅಶ್ವಥ್ ನಾರಾಯಣ್ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸುವಂತೆ ಒತ್ತಾಯಿಸಿದರು ಅಷ್ಟೇ ಅಲ್ಲದೇ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ದಿಸಲು ಅವಕಾಶ ನೀಡದಂತೆ ಹಾಗೂ ಸಚಿವರ ಮೇಲೆ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ನಾಗರಾಜ್ ಅವರು ಒತ್ತಾಯಿಸಿದ್ದಾರೆ.