ಮೈಸೂರು:
ಕೃಷ್ಣ ರಾಜ ಕ್ಷೇತ್ರದ ಸಾರ್ವಜನಿಕ ಸ್ಥಳಗಳಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡು ರಾಷ್ಟ್ರೀಯ ಪಕ್ಷಿಗಳು ರಾತ್ರೋರಾತ್ರಿ ಗೋಡೆಗಳ ಮೇಲೆ ತಮ್ಮ ತಮ್ಮ ಪಕ್ಷಗಳ ಪರವಾಗಿ ಚುನಾವಣೆಗೆ ಸಂಭಂದಪಟ್ಟ ಜಾಹೀರಾತುಗಳನ್ನು ಹಾಕಿರುವುದನ್ನು ತೀವ್ರವಾಗಿ ಖಂಡಿಸಿದ ಕರ್ನಾಟಕ ಪ್ರಜಾ ಪಾರ್ಟಿ ಯ ಕೃಷ್ಣ ರಾಜ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ ತೇಜಸ್ವಿ ನಾಗಲಿಂಗ ಸ್ವಾಮಿ
ಇಂದು ಮೈಸೂರು ಮಹಾನಗರ ಪಾಲಿಕಯ ಆಯುಕ್ತರನ್ನು ಭೇಟಿ ಮಾಡಿ ಕೂಡಲೇ ಸಾರ್ವಜನಿಕ ಸ್ಥಳಗಳಲ್ಲಿ ಹಾಕಿರುವ ಭಿತ್ತಿ ಚಿತ್ರಗಳನ್ನು ತೆರವು ಗೊಳಿಸಬೇಕೆಂದು ಮನವಿ ಮಾಡಿದರು
ಈ ಸಂದರ್ಭದಲ್ಲಿ
ಕರ್ನಾಟಕ ಪ್ರಜಾ ಪಾರ್ಟಿಯ ಕೃಷ್ಣ ರಾಜ ಕ್ಷೇತ್ರದ ಯುವ ಘಟಕದ ಅಧ್ಯಕ್ಷರಾದ ರವಿಕಾಳೇ ಗೌಡ, ಕೃಷ್ಣ ರಾಜ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಮಂಜುನಾಥ ಇದ್ದರು.
