ಹನೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ದ ಅವರು ಮಾರ್ಚ್ 1ರಂದು ಹನೂರು ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನಲೆ ಅಂದು ಹನೂರು ವಿಧಾನಸಭಾ ಕ್ಷೇತ್ರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.ಈ ಹಿನ್ನಲೆಯಲ್ಲಿ ಕ್ಷೇತ್ರದ ಬಿಜೆಪಿ ಮುಖಂಡರು, ಕಾರ್ಯಕರ್ತರಗಳು ಹಾಗೂ ಬಿಜೆಪಿ ವಿವಿಧ ಶಕ್ತಿಕೇಂದ್ರಗಳ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಉಪಾಧ್ಯಕ್ಷ ಡಾ.ದತ್ತೇಶ್ ಕುಮಾರ್ ಮನವಿ ಮಾಡಿದ್ದಾರೆ.
ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರುಗಳು, ಸಂಸದರು ಆಗಮಿಸಲಿದ್ದಾರೆ. ಉದ್ಘಾಟನೆ ಜೊತೆಗೆ ಬೃಹತ್ ವೇದಿಕೆ ಕಾರ್ಯಕ್ರಮವನ್ನು ಹನೂರಿನಲ್ಲಿ 12 ಗಂಟೆಗೆ ಆಯೋಜಿಸಲಾಗಿದೆ. ಕಡಿಮೆ ಅವಧಿ ಇರುವುದರಿಂದ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಕ್ತಿ ಕೇಂದ್ರಗಳಿಗೆ ಬರಲು ಸಾಧ್ಯವಿಲ್ಲ. ಈ ಹಿನ್ನಲೆಯಲ್ಲಿ ಆಯ್ದ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡಿಕೊಂಡು ನಾನು ಡಾ. ಪ್ರೀತನ್ ನಾಗಪ್ಪ, ಬಿ. ವೆಂಕಟೇಶ್, ನಿಶಾಂತ್ ಕಾರ್ಯಕ್ರಮದ ಜವಾಬ್ದಾರಿಯನ್ನು ವಹಿಸಲಿದ್ದೇವೆ.
ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪರಿಷತ್ ಸದಸ್ಯ ಬೂದುಬಾಳು ವೆಂಕಟಸ್ವಾಮಿ, ಬಿಜೆಪಿ ಹನೂರು ಮಂಡಲ ಅಧ್ಯಕ್ಷರಾದ ಮಹಾಲಿಂಗನ ಕಟ್ಟೆ ಸಿದ್ದಪ್ಪ ಇದ್ದರು.
ವರದಿ:ಉಸ್ಮಾನ್ ಖಾನ್