ಹನೂರು :ಮಾರ್ಚ್ 1ರಂದು ವಿಜಯ ಸಂಕಲ್ಪ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಯಶಸ್ವಿ ಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದತ್ತೆಶ್ ಕುಮಾರ್ ಅವರು ತಿಳಿಸಿದರು.
ಹನೂರು ಪಟ್ಟಣದ ಬಿಜೆಪಿ ಮಂಡಲ ಕಚೇರಿಯಲ್ಲಿ ಬಿಜೆಪಿ ಸಂಕಲ್ಪ ಯಾತ್ರೆ ಅಂಗವಾಗಿ ಕರೆಯಲಾಗಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು ಮಾರ್ಚ್ 1ರಂದು ಬಿಜೆಪಿ ಪಕ್ಷದ ವತಿಯಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಲೆ ಮಹದೇಶ್ವರ ಬೆಟ್ಟದಲ್ಲಿ ಚಾಲನೆ ನೀಡಲಾಗುವುದು.
ಹೆಲಿ ಕ್ಯಾಪ್ಟರ್ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿ
ಸ್ವಾಮಿಯ ದರ್ಶನ ಪಡೆದು ನಂತರ ಬಿಜೆಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ದೇವಾಲಯದ ಮುಂಭಾಗದಲ್ಲಿ ಬಿಜೆಪಿ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಲಾಗುತ್ತದೆ, ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ಭೇಟಿ ನೀಡುವರು,
ನಂತರ ಹೆಲಿ ಕ್ಯಾಪ್ಟರ್ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ, ನಂತರ ಆರ್ ಎಸ್ ದೊಡ್ಡಿ ಯಲ್ಲಿ ಆಯೋಜನೆ ಮಾಡಿರುವ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಲಿದ್ದಾರೆ
ಕಾರ್ಯಕ್ರಮದಲ್ಲಿ ಸುಮಾರು 25ಸಾವಿರಕ್ಕೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಸೇರಲಿದ್ದಾರೆ ಆದ್ದರಿಂದ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು,
ಇನ್ನೂ ಕಾರ್ಯಕ್ರಮದಲ್ಲಿ ಸಚಿವರು ಹಾಗೂ ಶಾಸಕರುಗಳು ಭಾಗವಹಿಸಲಿದ್ದಾರೆ
ಈ ಸಂದರ್ಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ಕೆರೆ ಹಳ್ಳಿ ಮಹಾದೇವಸ್ವಾಮಿ, , ಜಿಲ್ಲಾ ಹಿರಿಯ ಉಪಾಧ್ಯಕ್ಷ ಬೂದು ಬಾಳು ವೆಂಕಟ ಸ್ವಾಮಿ, ಜಿಲ್ಲಾ ಮಾಧ್ಯಮ ವಕ್ತಾರಾ ಬಸವರಾಜಪ್ಪ, ರಥ ಯಾತ್ರೆ ಕಾರ್ಯಕ್ರಮ ಸಂಚಾಲಕರಾದ ಪ್ರೀತನ್ ನಾಗಪ್ಪ, ಮಂಡಲ ಅಧ್ಯಕ್ಷ ಸಿದ್ದಪ್ಪ, ಒಬಿಸಿ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ,ವೆಂಕಟೇಶ್, ಯುವ ಮುಖಂಡ ನಿಶಾಂತ್, ಮಾಧ್ಯಮ ಸಂಚಾಲಕ, ಮಧು,ಮುಖಂಡರುಗಳಾದ ಮಂಗಲ ಪ್ರಕಾಶ್, ನಂಜಪ್ಪ,ಚಿಕ್ಕಸ್ವಾಮಿ, ವೆಂಕಟೇಗೌಡ, ಶ್ರೀ ನಿವಾಸ್, ಸೇರಿದಂತೆ ಇತರರು
ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್