ರಾಯಚೂರು/ಲಿಂಗಸುಗೂರು:(ಮಾ2 ರಂದು) ಬಿಜೆಪಿ ಮಹಿಳಾ ಮೋರ್ಚಾ ಲಿಂಗಸುಗೂರು ಪುರಸಭೆ ವ್ಯಾಪ್ತಿಯ ಅವರ 4 ನೇ ವಾರ್ಡಿನ ನಲ್ಲಿ ಕೇಂದ್ರ ಮತ್ತು ರಾಜ್ಯ ಬಿಜೆಪಿ ಪಕ್ಷದ ಹಾಗೂ ಹಟ್ಟಿ ಚಿನ್ನದಗಣಿ ಅಧ್ಯಕ್ಷರಾದ ಸನ್ಮಾನ್ಯಶ್ರೀ ಮಾನಪ್ಪ ಡಿ ವಜ್ಜಲರ ನಿರ್ದೇಶನದಂತೆ ವಿಜಯ ಸಂಕಲ್ಪ ಅಭಿಯಾನ ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಕರಿಯಪ್ಪ ವಜ್ಜಲ್ ಅವರ ನೇತೃತ್ವದಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷರಾದ ಜಯಶ್ರೀ ಸಕ್ರಿಯವರ ಅಧ್ಯಕ್ಷತೆಯಲ್ಲಿ
ವಾರ್ಡನ ಪ್ರತಿ ಮನೆ ಮನೆಗೆ ತೆರಳಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಸಾಧನೆಗಳ ಕರಪತ್ರಗಳನ್ನು ವಿತರಿಸುವುದರ ಜೊತೆಗೆ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಕರೆ ನೀಡಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಬೆಂಬಲಿಸುವಂತೆ ಜನರಲ್ಲಿ ಮನವಿ ಮಾಡಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ವಿಜಯ ಸಂಕಲ್ಪ ಅಭಿಯಾನದಲ್ಲಿ ಭಾಗವಹಿಸಿದ್ದರು.




















