ಬೆಂಗಳೂರು: ಪಂಚಮಸಾಲಿ 2ಎ ಮೀಸಲಾತಿ ಧರಣಿ ಮುಂದುವರೆದಿದ್ದು ಬೆಂಗಳೂರಿನ ಪ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಧರಣಿ 48ನೇ ದಿನಕ್ಕೆ ಕಾಲಿಟ್ಟಿದ್ದರೂ ಸರಕಾರ ಮೌನವಹಿಸಿದ್ದು ಇದೀಗ ಮಾ.4ರಂದು ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಜಿಲ್ಲೆ ಹಾಗೂ ತಾಲೂಕುಗಳಲ್ಲಿ ರಾಜ್ಯ, ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ.
ಬಸವ ಜಯಮೃತ್ಯುಂಜಯಶ್ರೀ ಹೆದ್ದಾರಿ ತಡೆದು ಪ್ರತಿಭಟನೆ ಆಡಲು ಕರೆ ಕೊಟ್ಟಿದ್ದು ರಾಜ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸುವಂತೆ ಕಳೆದ ಎರಡು ವರ್ಷಗಳಿಂದ ಹೋರಾಟ ಮಾಡಲಾಗುತ್ತಿದೆ.ಈ ಸರ್ಕಾರದ ಅವಧಿಯಲ್ಲಿಯೇ ಮೀಸಲಾತಿ ಒಡೆಯುವ ನಿಟ್ಟಿನಲ್ಲಿ ದೊಡ್ಡ ಮಟ್ಟದ ಹೋರಾಟ ಆರಂಭಿಸಲಾಗಿತ್ತು.ಇದಕ್ಕೆ ಮಣಿದಿದ್ದ ಸರ್ಕಾರ ಬೆಳಗಾವಿ ಅಧಿವೇಶನದ ಕೊನೆಯ ದಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಲಿಂಗಾಯತ, ಒಕ್ಕಲಿಗ ಮತ್ತು ಪಂಚಮಸಾಲಿ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗವನ್ನು ಸೃಷ್ಟಿಸಿ ಮೀಸಲಾತಿ ನೀಡಲು ಮುಂದಾಗಿತ್ತು. ಆದರೆ, ಈ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.