ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಶಹಾಪುರ ಪಟ್ಟಣದಲ್ಲಿ ವಿಜಯ ಸಂಕಲ್ಪ ಯಾತ್ರೆ

ಯಾದಗಿರಿ ಜಿಲ್ಲೆಯ ಶಹಾಪುರ ಪಟ್ಟಣದಲ್ಲಿ ವಿಜಯ ಸಂಕಲ್ಪ ಯಾತ್ರೆ ಯಶಸ್ವಿಯಾಗಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿ.ಟಿ ರವಿ ಪ್ರಧಾನ ಕಾರ್ಯದರ್ಶಿಗಳು ಸಂಸದರು ಪತ್ರಿಕಾಗೋಷ್ಠಿ ನಡೆಸಿದರು.
ವಿಜಯ ಸಂಕಲ್ಪಯಾತ್ರೆ ಶಹಾಪುರ ವಿಧಾನಸಭಾ ಕ್ಷೆತ್ರದಲ್ಲಿ ರೋಡ್ ಶೋ ಮೂಲಕ ಅದ್ದೂರಿಯಾಗಿ ನಡೆಯಿತು ಶಹಾಪುರ ಮತ ಕ್ಷೆತ್ರದ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರುಗಳು ಈ ವಿಜಯ ಸಂಕಲ್ಪ ಯಾತ್ರೆಯನ್ನು ಅತಿ ವಿಜೃಂಭಣೆಯಿಂದ ಸ್ವಾಗತ ಮಾಡಿಕೊಂಡು
ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಕಾರ್ಯಕರ್ತರ ಉತ್ಸಹ ನೋಡಿದ್ರೆ ಈ ಬಾರಿ ಶಹಾಪುರ ನಗರದಲ್ಲಿ ಬಿಜೆಪಿ ಬಾವುಟ ಹಾರುವುದು ಗ್ಯಾರಂಟಿ ಎಂದು ಹೇಳಿದರು ಶ್ರೀ ರಾಮುಲು ಅವರು ನಮ್ಮ ಕಾರ್ಯಕರ್ತರು ಇದೆ ಉತ್ಸಾಹವನ್ನು ಚುನಾವಣೆಯಲ್ಲಿ ತೋರಿಸಿ ಬಿಜೆಪಿ ಅಭ್ಯರ್ಥಿ ಯಾರೇ ಆಗಿರಲಿ ಗೆಲಿಸುಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ಗುರುವಾರ ಮಾರ್ಚ್ 9ರಂದು ಬೆಳಗ್ಗೆ 11.ಗಂಟೆಗೆ ಯಾದಗಿರಿ ಜಿಲ್ಲೆಯ ಶಹಾಪುರ ಮತಕ್ಷೇತ್ರದಲ್ಲಿ ರೋಡ್ ಶೋ ನಡೆಸಲಾಯಿತು.
ಸ್ಥಳೀಯ ಮಾಜಿ ಶಾಸಕರಾದ ಗುರು ಪಾಟೀಲ್,ಡಾ||ಚಂದ್ರಶೇಖರ್ ಸುಬೇದಾರ್,ಡಾ|| ವೀರಭದ್ರೇಗೌಡ ಹೊಸಮನಿ,ಅಮೀನ್ ರೆಡ್ಡಿ ಯಾಳಗಿ,ಮಾಜಿ ಮುಖ್ಯಮಂತ್ರಿಗಳು ಜಗದೀಶ್ ಶೆಟ್ಟರ್,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು,ಸಿ.ಟಿ.ರವಿ, ಸಂಸದರು, ರಾಜಾ ಅಮರೇಶ್ವರ ನಾಯಕ್, ರಾಜ್ಯ ಸಚಿವರಾದ ರಾಮುಲು, ಸುರಪುರ ಶಾಸಕರಾದ ರಾಜುಗೌಡ, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸಿದ್ದರಾಜು, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಅಧ್ಯಕ್ಷರು ಮಾರುತಿ ರಾವ್ ಮೂಳೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯರು ಅಮರನಾಥ ಪಾಟೀಲ್, ಯಾದಗಿರಿ ಜಿಲ್ಲಾಧ್ಯಕ್ಷರು ಡಾ. ಶರಣಭೂಪಾಲ್ ರೆಡ್ಡಿ, ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷರು ದೇವೇಂದ್ರ ನಾಥ್, ಯಾದಗಿರಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತರು ಹಾಗೂ ಶಹಾಪುರ ನಗರದ ಬಿಜೆಪಿ ಕಾರ್ಯಕರ್ತರು ರೋಡ್- ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ