ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೆಪಿಸಿಸಿ ಕಾರ್ಯಧ್ಯಕ್ಷ ಧ್ರುವ ನಾರಾಯಣ್ ನಿಧನ ರಾಜ್ಯಕ್ಕೆ ತುಂಬಲಾರದ ನಷ್ಟ :ಶಾಸಕ ಆರ್ ನರೇಂದ್ರ

ಹನೂರು :ವಾಯು ವಿಹಾರಕ್ಕೆ ತೆರಳಿದ ಸಮಯದಲ್ಲಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ಹೃದಯಾಘಾತದಿಂದ ಇಂದು (ಶನಿವಾರ)
ಮೃತಪಟ್ಟಿದ್ದಾರೆ. 61ನೇ ವಯಸ್ಸಿನಲ್ಲಿ ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್ ಎಮ್ ಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದರು ,ಮಾಜಿ ಸಂಸದರಾದ ಧ್ರುವನಾರಾಯಣ್ ನಿಧನಕ್ಕೆ ಚಾಮರಾಜನಗರ ಜಿಲ್ಲೆಯ ರಾಜಕೀಯ ಗಣ್ಯರುಗಳಾದ ಶಾಸಕರಾದ ಆರ್ ನರೇಂದ್ರ ,ಪುಟ್ಟರಂಗಶೆಟ್ಟಿ ,ನಿರಂಜನ್ ಕುಮಾರ್ ,ಎನ್ ಮಹೇಶ್ ,ಹಾಗೂ ಮುಖಂಡರುಗಳಾದ , ಎ ಆರ್ ಕೆ ,ಬಾಲರಾಜ್ ,ಜಯಣ್ಣ ,ರಾಮಚೆಂದ್ರು, ಡಾಕ್ಟರ್ ದತ್ತೇಶ್ ಕುಮಾರ್ ,ಎಮ್ ಆರ್ ಮಂಜುನಾಥ್ ,ಮರಿಸ್ವಾಮಿ , ಸೇರಿದಂತೆ ಅನೇಕರು ಕಂಬನಿ ಮಿಡಿದಿದ್ದಾರೆ. ಇವರು 1961 ಜುಲೈ 31ರಂದು ಚಾಮರಾಜನಗರದ ಹಗ್ಗವಾಡಿಯಲ್ಲಿ ಜನಿಸಿದ್ದ,ಇವರು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಬಿಎಸ್‌ಸಿ ಕೃಷಿ ಪದವಿ
ಪಡೆದುಕೊಂಡಿದ್ದರು. ನಂತರ ಸ್ನಾತಕೋತ್ತರ ಪದವಿ ಪಡೆದು, 1983ರಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ತಮ್ಮ ರಾಜಕೀಯ ಜೀವನ ಪ್ರಾರಂಬಿಸಿ ಜೊತೆಯಲ್ಲಿ ಸ್ನೇಹಿತರನ್ನು ಸೇರಿಸಿ ಸಂಘಟನೆಗೆ ಹೆಸರುವಾಸಿಯಾಗಿದ್ದರು ,
ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು.ರಾಜ್ಯ ರಾಜಕಾರಣಕ್ಕೆ ಮರಳುವ ಇಂಗಿತ ವ್ಯಕ್ತಪಡಿಸಿದ್ದು ಅದರ ಅಂಗವಾಗಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. ಕೇವಲ ಒಂದು ಮತದಿಂದ ಗೆದ್ದು
2 ಬಾರಿ ಶಾಸಕರಾಗಿ ಎರಡು ಬಾರಿ ಸಂಸದರಾಗಿ
ಆಯ್ಕೆಯಾಗಿದ್ದರು ಕಳೆದ ಲೋಕಸಭಾ ಚುನಾವಣೆಯಲ್ಲಿ ವಿ ಶ್ರೀನಿವಾಸಪ್ರಸಾದ್ ರ ವಿರುದ್ದ ಪರಭಾವಗೊಂಡಿದ್ದರು ಇವರನ್ನು ರಾಜಕೀಯದಲ್ಲಿ ರಾಜ್ಯದಲ್ಲೆ ಅಜಾತಶತ್ರು ಎಂದು ಕರೆಯುತ್ತಿದ್ದರು ,ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿದ್ದಾರೆ ,ಇವರ ಅಂತ್ಯ ಸಂಸ್ಕಾರವನ್ನು ತಮ್ಮ ಹುಟ್ಟುರಾದ ಹೆಗ್ಗವಾಡಿಪುರದಲ್ಲಿ ನೆರವೆರಿಸಲಿದ್ದವಿ ,ಎಂದು ಕುಟುಂಬದ ಮೂಲಗಳು ತಿಳಿಸಿವೆ .ಜಿಲ್ಲೆಯ ಬಹುತೇಕ ಎಲ್ಲಾ ತಾಲ್ಲೂಕು ವರ್ತಕರ ಸಂಘದಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ವುವ ಮೂಲಕ ಸಂತಾಪ ಸೂಚಿಸಿದರು.

ವರದಿ :ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ