ಮೈಸೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಅವರು ಸರಸ್ವತಿ ಪುರಂ ಠಾಣೆಯ ಪೋಲಿಸರ ಕ್ಷಮೆಯಾಚಿಸುವಂತೆ ಕನ್ನಡ ಹೋರಾಟಗಾರ ಕೃಷ್ಣ ರಾಜ ಕ್ಷೇತ್ರದ ಚುನಾವಣಾ ಅಭ್ಯರ್ಥಿಯಾದ “ಶ್ರೀ ತೇಜಸ್ವಿ ನಾಗಲಿಂಗ ಸ್ವಾಮಿ” ಆಗ್ರಹಿಸಿದ್ದಾರೆ.
ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ ರವಿ ಕೃಷ್ಣಾರೆಡ್ಡಿ ಯವರು ಮೈಸೂರಿನ ಸರಸ್ವತಿ ಪುರಂ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮೇಶ್ ಹಾಗೂ ಸಿಬ್ಬಂದಿಗಳ ಮೇಲೆ ಲಂಚದ ಆರೋಪ ಮಾಡಿ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಇದು ಖಂಡಿತಾ ಸರಿಯಲ್ಲ ಎಂದು ಕನ್ನಡಪರ ಹೋರಾಟಗಾರ ತೇಜಸ್ವಿ ನಾಗಲಿಂಗ ಸ್ವಾಮಿ ಹೇಳಿದ್ದಾರೆ.
ರವಿ ಕೃಷ್ಣಾರೆಡ್ಡಿ ಯವರು ಒಂದು ಪಕ್ಷದ ಅಧ್ಯಕ್ಷರಾಗಿ ಸಂವಿಧಾನದ ಅಡಿಯಲ್ಲಿ ಪರೀಕ್ಷೆ ಬರೆದು ಉತ್ತಿರ್ಣರಾಗಿ ಪೋಲಿಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಓರ್ವ ಅಧಿಕಾರಿಗೆ ಸಾರ್ವಜನಿಕ ಸ್ಥಳದಲ್ಲಿ ಮಾಧ್ಯಮ ಮೂಲಕ ನಿಂದಿಸಿ ಕರ್ತವ್ಯಕ್ಕೆ ಅಡ್ಡಿ ಪಡಿಸುತ್ತಿರುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಸಂವಿಧಾನದ ಅಡಿಯಲ್ಲಿ ಕಾರ್ಯ ನಿರ್ವಾಹಿಸುತ್ತಿರುವ ಒಬ್ಬ ದಕ್ಷ, ಪ್ರಾಮಾಣಿಕ, ಪೋಲಿಸ್ ಅಧಿಕಾರಿಯನ್ನು ಏಕವಚನ ಬಳಸಿ ಸುಳ್ಳು ಆರೋಪಗಳನ್ನು ಮಾಡಿ ನಿಂದಿಸುವುದು ರವಿ ಕೃಷ್ಣಾರೆಡ್ಡಿ ರವರಿಗೆ ಶೋಭೆ ತರುವುದಿಲ್ಲ ಎಂದು ತೇಜಸ್ವಿ ಹೇಳಿದ್ದಾರೆ.
ಕೂಡಲೇ ಸರಸ್ವತಿ ಪುರಂ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಮೇಶ್ ರವರಲ್ಲಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ರವಿಕೃಷ್ಣ ರೆಡ್ಡಿಯನ್ನು ತೇಜಸ್ವಿ ಆಗ್ರಹಿಸಿದ್ದಾರೆ.