ವಿಜಯಪುರ/ ಇಂಡಿ: ಗುರು ಹಿರಿಯರಿಗೆ ಗೌರವ ಕೊಡುವ ಮೂಲಕ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಸತತ ಪ್ರಯತ್ನ, ಸಮಯಪಾಲನೆ, ಪ್ರಾಮಾಣಿಕತೆ ರೂಢಿಸಿಕೊಂಡರೆ ಯಶಸ್ಸು ನಿಮ್ಮ ಪಾಲಾಗುತ್ತದೆ ಎಂದು ಇಂಗಳಗಿ ಉರ್ದು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಬಾಬು ಅತ್ತಾರ ಹೇಳಿದರು.
ಅವರು ತಾಲೂಕಿನ ಇಂಗಳಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡ 8ನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು.
ಅರಿವಿನ ಮೂಲಕ ನೀವು ಸಂಪಾದಿಸಿದ ಜ್ಞಾನವನ್ನು ಸಮಾಜದ ಒಳಿತಿಗೆ ಬಳಕೆ ಮಾಡಬೇಕು ಎಂದು ಹೇಳಿದರು.
ಸಮಾಜ ಸೇವಕರಾದ ಹಸನ್ ಮುಜಾವರ ಮಾತನಾಡಿ,ವಿದ್ಯಾರ್ಥಿಗಳು ಶಿಸ್ತು, ಸಮಯ ಪ್ರಜ್ಞೆ ರೂಢಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಬೇಕು.ಆತ್ಮವಿಶ್ವಾಸದಿಂದ ಮುನ್ನಡೆಯಬೇಕು ಎಂದು ಹೇಳಿದರು.
ಶಾಲಾ ಮುಖ್ಯ ಶಿಕ್ಷಕ ಕಾಸಿಂ ಮಕಾನದಾರ ಮಾತನಾಡಿ, ವಿದ್ಯಾರ್ಥಿಗಳು ತಮಗೆ ಸಿಗುವ ಅವಕಾಶಗಳನ್ನು ಶ್ರದ್ಧೆಯಿಂದ ಬಳಸಿಕೊಂಡು ಜೀವನದಲ್ಲಿ ಉನ್ನತ ಮಟ್ಟಕ್ಕೇರಲಿ ಮತ್ತು ಸಮಾಜ-ರಾಷ್ಟ್ರಕ್ಕೆ ಉತ್ತಮ ಕೊಡುಗೆಯಾಗಿ ಹೊರಹೊಮ್ಮಲಿ ಎಂದು ಹಾರೈಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಪೈಗಂಬರ್ ಮಣೂರ,ಹಸನ್ ಅರಸಂಘ,ಶಬ್ಬೀರ ಕೋಕಣಿ,ಶಿಕ್ಷಕರಾದ ಮಹಿಬೂಬ್ ಪಟೇಲ್,ನಶ್ರೀನ್ ತುರ್ಕಿ,ಜಕೀರ್ ಹೊರ್ತಿ,ಆರ್ ಎಚ್ ಘೋಡಕೆ,
ಅತಿಥಿ ಶಿಕ್ಷಕಿ ಜಾಸ್ಮಿನ್ ಅರಬ,ಡಿಎಡ್ ವಿದ್ಯಾರ್ಥಿಗಳಾದ ಸಮೀನ್ ಗೌರ,ತಂಜೀಮ್ ಪಟೇಲ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.ವಿವಿಧ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.