ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

TSS ಸಂಸ್ಥೆಯ ಶ್ರೀಪಾದ್ ಹೆಗಡೆ ಕಡವೆ ಸಂಕೀರ್ಣದ ಸೂಪರ್ ಮಾರ್ಕೆಟ್ ಉದ್ಘಾಟನೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದ ಹುಬ್ಬಳ್ಳಿ ರಸ್ತೆಯಲ್ಲಿರುವ ಎಪಿಎಂಸಿ ಆವರಣದಲ್ಲಿ ಶಿರಸಿಯ TSS ಸಂಸ್ಥೆಯ ಶ್ರೀಪಾದ್ ಹೆಗಡೆ ಕಡವೆ ಸಂಕೀರ್ಣದ ಸೂಪರ್ ಮಾರ್ಕೆಟ್ ಇಂದು ಬುಧವಾರ ಕಾರ್ಮಿಕ ಸಚಿವರಾದ ಸನ್ಮಾನ್ಯ ಶಿವರಾಮ ಹೆಗಡೆ ಹಾಗೂ ರಾಮಕೃಷ್ಣ ಎಸ್ ಹೆಗಡೆ ಕಡವೆ ಅವರಿಂದ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು.
ಇದೆ ವೇಳೆ ಮಾಜಿ ಜಿಲ್ಲಾ ಪಂಚಾಯ್ತಿ ಸದಸ್ಯರಾದ ಎಲ್ ಟಿ ಪಾಟೀಲ್ ಹಾಗೂ ಮಾಜಿ ಶಾಸಕರು ಮತ್ತು ಎನ್ ಡಬ್ಲು ಕೆ ಆರ್ ಟಿ ಸಿ ಮಾಜಿ ಅಧ್ಯಕ್ಷರಾದ ವಿ ಏಸ್ ಪಾಟೀಲ್ ಹಾಗೂ TSS ಸಂಸ್ಥೆಯ ಹಿರಿಯ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿವರ್ಗ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೀಪ ಬೆಳಗುವುದರ ಮೂಲಕ TSS ಸಂಸ್ಥೆಗೆ ಕಾರ್ಯಕ್ರಮಕ್ಕೆ ಬಂದ ಅತಿಥಿಗಳು ಶುಭ ಹಾರೈಸಿದರು.

ಗ್ರಾಹಕರಿಗೆ ಉತ್ತಮ ಸೇವೆ ನೀಡುವ ಉದ್ದೇಶದಿಂದ ಪ್ರಾರಂಭವಾದ TSS ಸ್ಥಳೀಯ ನಿರುದ್ಯೋಗಿ ಯುವಕರಿಗೂ ಉದ್ಯೋಗ ನೀಡಿ,ಮುಂಡಗೋಡ ದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಲಿ ಎಂಬುದು ಸಾರ್ವಜನಿಕರ ಅಪೇಕ್ಷೆಯಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ