ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬ ಆಚರಣೆ

ಹನೂರು :ಪಟ್ಟಣದಲ್ಲಿ ಅಪ್ಪು ಅಭಿಮಾನಿಗಳಿಂದ ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬವನ್ನು ಆಚರಣೆ ಮಾಡಲಾಯಿತು,

ಡಾ ಬಿ ಆರ್ ಅಂಬೇಡ್ಕರ್ ವೃತ್ತದಿಂದ ಖಾಸಗಿ ಬಸ್ ನಿಲ್ದಾಣ, ದಿವಂಗತ ನಾಗಪ್ಪನವರ ವೃತ್ತ ಸೇರಿದಂತೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ತಮಟೆಯ ಸದ್ದಿನೊಂದಿಗೆ ಅಪ್ಪು ಅವರ ಭಾವ ಚಿತ್ರವನ್ನು ಬಲೂನು ನಿಂದ ಅಲಂಕಾರ ಮಾಡಿ ಮೆರವಣಿಗೆ ಮಾಡುವ ಮೂಲಕ ಅವರ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಣೆ, ಮಾಡಿದರು, ಬಳಿಕ ಯುವಕರಿಂದ ಕೇಕ್ ಕತ್ತರಿಸಿ ವಿತರಣೆ ಮಾಡಲಾಯಿತು,

ಅನ್ನ ಸಂತರ್ಪಣೆ : ಬೆಟ್ಟದ ಹೂ ಅಪ್ಪು ಬಾಸ್ ಅವರ ಹುಟ್ಟುಹಬ್ಬದ ಅಂಗವಾಗಿ ಯುವಕರಿಂದ ಡಾ, ಬಿ, ಆರ್ ಅಂಬೇಡ್ಕರ್ ಅವರ ವೃತ್ತದ ಬಳಿ ಮೊಸರನ್ನ, ತಂಪು ಪಾನೀಯಗಳನ್ನು ವಿತರಣೆ ಮಾಡಿದರು, ತಮ್ಮ ನೆಚ್ಚಿನ ನಟ ನಿಗೆ ಅದ್ದೂರಿಯಾಗಿ ಹುಟ್ಟುಹಬ್ಬವನ್ನು ಆಚರಣೆ ಮಾಡಿದರು,

ತಾಲೂಕಿನ ವಿವಿದೆಡೆ ಆಚರಣೆ : ನೆಚ್ಚಿನ ನಟ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳಿಂದ ಅನ್ನ ಸಂತರ್ಪಣೆ, ತಂಪು ಪಾನೀಯ, ರಕ್ತ ದಾನ ಶಿಬಿರಗಳನ್ನು ಆಯೋಜನೆ ಮಾಡುವ ಮೂಲಕ ಪುನೀತ್ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅವರ ಅಭಿಮಾನಿಗಳಿಂದ ಆಚರಣೆ ಮಾಡಲಾಯಿತು.

ವರದಿ :ಉಸ್ಮಾನ್ ಖಾನ್ .

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ