ಬಾಗಲಕೋಟೆ: ಈ ವಿಶೇಷ ದಿನದಂದು ಬಾಗಲಕೋಟೆ ಜಿಲ್ಲೆಯ ಶಿರೂರ ಪಟ್ಟಣದಲ್ಲಿ ಸೂರ್ಯನ ಕೌತುಕವೊಂದು ನಡೆಯುತ್ತದೆ ಸಾವಿರ ವರ್ಷ ಇತಿಹಾಸ ಇರುವ ಲಿಂಗಕ್ಕೆ ಸೂರ್ಯ ರಶ್ಮಿ ನೇರವಾಗಿ ಬೀಳುತ್ತದೆ ಹೀಗಾಗಿ ಇಲ್ಲಿನ ಭಕ್ತರು ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ.
ಯುಗಾದಿ ಹಬ್ಬವನ್ನು ಹಿಂದು ಸಂಸ್ಕೃತಿ ಪ್ರಕಾರ, ಹೊಸ ವರ್ಷವಾಗಿ ಆಚರಣೆ ಮಾಡಲಾಗುತ್ತದೆ. ಶಿರೂರ ಪಟ್ಟಣದ ಸಿದ್ದೇಶ್ವರ ದೇವಸ್ಥಾನದಲ್ಲಿ ಯುಗಾದಿ ಹಬ್ಬವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ ಈ ದೇವಸ್ಥಾನದಲ್ಲಿ ಯುಗಾದಿ ವೇಳೆ ಎರಡ್ಮೂರು ದಿನಗಳ ಕಾಲ ಸೂರ್ಯ ರಶ್ಮಿ ಲಿಂಗದ ಮೇಲೆ ಬೀಳುತ್ತದೆ.
ಕಲ್ಯಾಣ ಚಾಲುಕ್ಯರ ಕಾಲದಲ್ಲಿ ಈ ದೇವಸ್ಥಾನವನ್ನು ನಿರ್ಮಾಣ ಮಾಡಲಾಗಿದೆ ಸೂರ್ಯನ ಚಲನೆ ಆಧಾರದ ಮೇಲೆ ನಿರ್ಮಿಸಲಾಗಿರುವ ವಿಶಿಷ್ಟ ವಾಸ್ತುಶಿಲ್ಪ ಹೊಂದಿರುವ ಈ ದೇವಾಲಯ ಪ್ರತಿವರ್ಷ ಯುಗಾದಿಯ ದಿನ ಈ ಅಚ್ಚರಿಗೆ ಕಾರಣವಾಗುತ್ತಿದೆ. ದೇವಸ್ಥಾನದಲ್ಲಿ ಯುಗಾದಿ ಹಬ್ಬದ ದಿನದಂದು, ವಿಶೇಷ ಪೂಜೆ ಮಾಡಲಾಗುತ್ತದೆ ನೂರಾರು ಭಕ್ತರು ಸೂರ್ಯನ ಕಿರಣ ಶಿವಲಿಂಗದ ಮೇಲೆ ಬೀಳುವ ದೃಶ್ಯವನ್ನು ಕಣ್ತುಂಬಿಕೊಳ್ಳುತ್ತಾರೆ.
ಇನ್ನು ವರ್ಷಕ್ಕೆ ಒಂದು ಬಾರಿ ನಡೆಯುವ ಈ ದೇವಸ್ಥಾನದ ರೋಚಕತೆಯನ್ನು ಜನರು ಕಾತುರದಿಂದ ಎದರು ನೋಡುತ್ತಾರೆ ಶತಮಾನದ ಇತಿಹಾಸ ಇರುವ ಈ ದೇವಾಲಯ ಖಗೋಳ ಕೌತುಕಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಹೇಳುತ್ತಾರೆ.
