ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕುರುಬರಿಗೆ ಯಾದಗಿರಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ನೀಡದಿದ್ದರೆ ಮುಂದಿನ ದಿನಗಳಲ್ಲಿ ತಕ್ಕಪಾಠ ಕಲಿಸುತ್ತೇವೆ

ಯಾದಗಿರಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದು, ಎಲ್ಲಾ ಪಕ್ಷಗಳಲ್ಲಿ ಟಿಕೆಟ್ ಗಾಗಿ ಪೈಪೋಟಿ ಪ್ರಾರಂಭವಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಕುರುಬರು ಅತಿ ಹೆಚ್ಚು ಜನಸಂಖ್ಯೆ ಹೊಂದಿದ್ದು, ಯಾದಗಿರಿ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಐದು ಜನ ಕುರುಬರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ. ಕುರುಬರಿಗೆ ಟಿಕೆಟ್ ನೀಡದಿದ್ದರೆ ಕಲ್ಯಾಣ ಕರ್ನಾಟಕದಾದ್ಯಂತ ಕಾಂಗ್ರೆಸ್ ಪಕ್ಷವನ್ನು ಸೋಲಿಸಲು ಕರೆ ಕೊಡುತ್ತೇವೆ. ಎಂದು ಕುರುಬ ಸಮಾಜ ಮತ್ತು ರಾಯಣ್ಣ ಯುವ ಪಡೆಯ ಅಧ್ಯಕ್ಷ ರಾಯಣ್ಣ ಛಲವಾದಿ ಕಾಂಗ್ರೆಸ್ ಪಕ್ಷಕ್ಕೆ ಎಚ್ಚರಿಕೆ ನೀಡಿದರು.
ನಗರದ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಯಚೂರು ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ ಕುರುಬರಿಗೆ ಟಿಕೆಟ್ ನೀಡಿಲ್ಲ. ಶಹಾಪುರದಲ್ಲಿ 60,000, ಸುರಪುರದಲ್ಲಿ 75,000 ಗುರುಮಿಠಕಲ್ ದಿಲ್ಲಿ 30,000 ಯಾದಗಿರಿ ಕ್ಷೇತ್ರದಲ್ಲಿ 35,000 ಕುರುಬ ಸಮಾಜದ ಮತದಾರರಿದ್ದು, ಈ ಕ್ಷೇತ್ರದಲ್ಲಿ ಕುರುಬರ ಮತಗಳು ನಿರ್ಣಾಯಕವಾಗಿವೆ.ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಪತ್ರಿಕೆ ಮುಖಾಂತರ ಎಚ್ಚರಿಕೆ ನೀಡಿದರು.
ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಇದನ್ನು ಮನಗಂಡು ಯಾದಗಿರಿ ಕ್ಷೇತ್ರಕ್ಕೆ ಕುರುಬರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ಕೋಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಮಹೇಶ ರಸ್ತಾಪುರ್ ಮಾತನಾಡಿ, ಕೋಳೂರು ಮಲ್ಲಪ್ಪನವರನ್ನು ಹೊರತುಪಡಿಸಿ ಇದುವರೆಗೂ ಯಾರು ಕೂಡ ಶಾಸಕರಾಗಿಲ್ಲ. ಇಲ್ಲಿಯವರೆಗೆ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಇದುವರೆಗೂ ನಾವು ಎಲ್ಲರನ್ನೂ ಬೆಂಬಲಿಸುತ್ತಾ ಬಂದಿದ್ದೇವೆ. ಪ್ರಸ್ತುತ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರು ಎಚ್ಚೆತ್ತುಕೊಂಡು ಕುರುಬ ಸಮಾಜದವರಿಗೆ ಯಾದಗಿರಿ ಕ್ಷೇತ್ರಕ್ಕೆ ಟಿಕೆಟ್ ಕೊಡದಿದ್ದರೆ. ಮುಂದಿನ ದಿನಗಳಲ್ಲಿ ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಗೆ ಕಾರಣವಾಗುತ್ತದೆ. ಎಂದು ರಾಯಣ್ಣ ಯುವ ಪಡೆ ಕಾಂಗ್ರೆಸ್ ನಾಯಕರಿಗೆ ಎಚ್ಚರಿಸಿದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ