ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನೀತಿ ಸಂಹಿತೆಯ ಆಳ ಮತ್ತು ಅಗಲ

ಭಾರತದ ಚುನಾವಣಾ ಆಯೋಗವು ಇಂದು ಕರ್ನಾಟಕ ವಿಧಾನಸಭೆ ಚುನಾವಣೆ(Karnataka Assembly Elections 2023) ಗೆ ದಿನಾಂಕವನ್ನು ಘೋಷಣೆ ಮಾಡಿದೆ. ತಕ್ಷಣದಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ನೀತಿ ಸಂಹಿತೆಯ ಅವಧಿಯಲ್ಲಿ ಎಲ್ಲಾ ಪಕ್ಷಗಳು ಚುನಾವಣಾ ಆಯೋಗದ ಪ್ರತಿಯೊಂದು ನಿರ್ಧಾರವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ. ಚುನಾವಣಾ ಆಯೋಗದ ಆದೇಶವನ್ನು ಪಾಲಿಸದಿದ್ದರೆ ಸಂಬಂಧಪಟ್ಟ ಮುಖಂಡರ ವಿರುದ್ಧ ಕ್ರಮ ಕೈಗೊಳ್ಳುವ ಹಕ್ಕು ಆಯೋಗಕ್ಕೆ ಇರುತ್ತದೆ. ಈಗ ಅಂತಹ ಪರಿಸ್ಥಿತಿಯಲ್ಲಿ ಈ ಚುನಾವಣಾ ನೀತಿ ಸಂಹಿತೆ ಎಂದರೇನು ಎಂಬುದನ್ನು ತಿಳಿಯುವ ಅಗತ್ಯವಿರುತ್ತದೆ. ಭಾರತದಲ್ಲಿ ನಡೆದ ಪ್ರಥಮ ಸಾರ್ವತ್ರಿಕ ಚುನಾವಣೆಯಿಂದಲೇ ( 1951-1952) ಭಾರತ ಚುನಾವಣಾ ಆಯೋಗ ನೀತಿ ಸಂಹಿತೆಯನ್ನು ಜಾರಿಗೆ ತರುತ್ತಲಿದೆ. ಕರ್ನಾಟಕದಲ್ಲಿ ಮೇ 10 ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದೆ.

ಆತ್ಮೀಯ ಮಾದರಿ ಮತದಾರರೇ ನೀತಿ ಸಂಹಿತೆ ಎಂದರೇನು. ನೀತಿ ಸಂಹಿತೆಯನ್ನು ಯಾರು ಜಾರಿ ಮಾಡುತ್ತಾರೆ. ಯಾವುದಕ್ಕೆ ರಿಯಾಯಿತಿ ಇರುತ್ತದೆ. ಯಾವುದಕ್ಕೆ ನಿಷೇಧ & ನಿರ್ಬಂಧವಿರುತ್ತದೆ ನೀತಿ ಸಮಿತಿ ಜಾರಿಯಲ್ಲಿ ಇರುವ ಸಮಯದಲ್ಲಿ ದಾಖಲಾದ ಪ್ರಕರಣಗಳನ್ನು ಯಾರು ವಿಚಾರಿಸುತ್ತಾರೆ ಎಂಬುದನ್ನು ತಿಳಿಸುವುದಕ್ಕಾಗಿ ಈ ಸಣ್ಣ ಲೇಖವನವನ್ನು ರಚಿಸಲಾಗಿದೆ.

  • ನೀತಿ ಸಂಹಿತೆ ಎಂದರೆ.. = ಚುನಾವಣೆ ಬಂದಾಗಲೆಲ್ಲಾ ಚುನಾವಣಾ ನೀತಿ ಸಂಹಿತೆಯದ್ದೇ ಸದ್ದು. ಸರಳ ಭಾಷೆಯಲ್ಲಿ ಹೇಳುವುದಾದರೆ, ಚುನಾವಣಾ ಅಕ್ರಮಗಳಿಗೆ ತಡೆ ಹಾಕಿ, ಸುಸೂತ್ರವಾಗಿ, ಶಾಂತಿಯುತ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಅನುಸರಿಸಲಾಗುವ ಕಾನೂನು ಕ್ರಮಗಳನ್ನು ನೀತಿ ಸಂಹಿತೆ ಎಂದು ಹೇಳಲಾಗುತ್ತದೆ. ಚುನಾವಣೆಗೆ ದಿನಾಂಕ ಘೋಷಣೆ ಆದಾಗಿನಿಂದ ಮತದಾನ ಮುಗಿಯುವವರೆಗೆ ಇದು ಜಾರಿಯಲ್ಲಿರುತ್ತದೆ. ಸರ್ಕಾರ, ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗುತ್ತದೆ.
  • ನೀತಿ ಸಂಹಿತೆ ಜಾರಿಗೆ. = ಆಯಾ ರಾಜ್ಯಗಳಲ್ಲಿ ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಗಳಿಗೆ ಕೇಂದ್ರ ಚುನಾವಣಾ ಆಯೋಗದ ಶಿಫಾರಸ್ಸಿನ ಮೇರೆಗೆ ರಾಜ್ಯ ಚುನಾವಣಾ ಆಯೋಗಗಳು ನೀತಿ ಸಂಹಿತೆಯನ್ನು ಜಾರಿಗೆ ತರುತ್ತವೆ.
  • ಏನೆಲ್ಲಾ ಮಾಡಬಹುದು.

1) ಕಾರ್ಯ ಪ್ರಗತಿಯಲ್ಲಿರುವ ಅಭಿವೃದ್ಧಿ ಯೋಜನೆಗಳನ್ನು ಮುಂದುವರಿಸಬಹುದು.

2) ಈಗಾಗಲೇ ಜಾರಿಲಿರುವ ಸರ್ಕಾರಿ ಕಾರ್ಯಕ್ರಮಗಳನ್ನು ಮುಂದುವರಿಸಲು ಯಾವುದೇ ಅಡ್ಡಿ ಇಲ್ಲ.

3) ಅಗತ್ಯವಿದ್ದರೆ ಚುನಾವಣಾ ಆಯೋಗದ ಅನುಮತಿ ಪಡೆದು ಅಧಿಕಾರಿಗಳ ಜೊತೆ ಸಭೆ ಮಾಡಬಹುದು.

4) ಶಾಸಕರು ಮತ್ತು ಸಚಿವರು ಸಂಬಂಧಿಸಿದ ಸರ್ಕಾರಿ ನಿವಾಸದಿಂದ ಅಧಿಕೃತ ಕಚೇರಿಗೆ ಹೋಗಲು ಮಾತ್ರ ಸರ್ಕಾರಿ ವಾಹನವನ್ನು ಬಳಸಬಹುದು.

5) ಬರ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಬಹುದು.

6) ಸಾರ್ವಜನಿಕ ಬಳಕೆಯ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅಧಿಕಾರಿಗಳು ಉದ್ಘಾಟನೆ ಮಾಡಬಹುದು.

7) ಬೆಳಿಗ್ಗೆ 6 ರಿಂದ ರಾತ್ರಿ 10 ಗಂಟೆಯವರೆಗೆ ಮಾತ್ರ ಧ್ವನಿವರ್ಧಕಗಳನ್ನು ಬಳಸಬಹುದು.

  • ಏನು ಮಾಡುವಂತಿಲ್ಲ.

1) ಸರ್ಕಾರ ಹೊಸ ಯೋಜನೆ ಘೋಷಣೆ ಮಾಡುವಂತಿಲ್ಲ.

2) ಸರ್ಕಾರ ಹೊಸ ಕಾರ್ಯಕ್ರಮ ಉದ್ಘಾಟನೆ ಮಾಡುವಂತಿಲ್ಲ.

3) ಸರ್ಕಾರ ಹೊಸ ಹೊಸ ಯೋಜನೆಗಳಿಗೆ ಬಜೆಟ್ ಅನ್ನು ಮಂಡಿಸುವಂತಿಲ್ಲ.

4) ಹೊಸ ಕಾಮಗಾರಿಗಳಿಗೆ ಟೆಂಡರನ್ನು ಕರೆಯುವಂತಿಲ್ಲ.

5) ಶಾಸಕರು ಮತ್ತು ಸಚಿವರು ಸರ್ಕಾರಿ ವಾಹನವನ್ನು ಬಳಸುವಂತಿಲ್ಲ. ಕಚೇರಿಗೆ ಹೋಗಲು ಮಾತ್ರ ಅವಕಾಶ.

6) ಅಧಿಕಾರಿಗಳ ಜೊತೆ ಶಾಸಕರು ಮತ್ತು ಸಚಿವರು ಸಭೆ ನಡೆಸುವಂತಿಲ್ಲ ಒಂದು ವೇಳೆ ನಡೆಸಿದರು ಚುನಾವಣೆ ಆಯೋಗದ ಒಪ್ಪಿಗೆ ಪಡೆದುಕೊಳ್ಳಬೇಕು.

7) ಶಾಸಕರು ಮತ್ತು ಸಚಿವರು ಸರಕಾರಿ ವಸತಿ ಗೃಹಗಳನ್ನು ಬಳಸುವಂತಿಲ್ಲ.

8) ಧಾರ್ಮಿಕ ಸ್ಥಳಗಳಲ್ಲಿ ಚುನಾವಣಾ ಪ್ರಚಾರ ಮಾಡುವಂತಿಲ್ಲ.

9) ಧರ್ಮ ಮತ್ತು ಜಾತಿಯನ್ನು ಆಧಾರವಾಗಿಟ್ಟುಕೊಂಡು ಮತ ಕೇಳುವಂತಿಲ್ಲ.

  • ನೀತಿ ಸಂಹಿತೆ ಯಾರಿಗೆ ಅನ್ವಯಿಸುತ್ತದೆ.
  • ಕಾರ್ಯಾಂಗ ಮತ್ತು ಶಾಸಕಾಂಗಕ್ಕೆ.
  • ಆಡಳಿತ ಮತ್ತು ವಿರೋಧ ಪಕ್ಷ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಿಗೆ.
  • ಸರಕಾರದ ಎಲ್ಲಾ ಇಲಾಖೆಗಳಿಗೆ.
  • ಸರ್ಕಾರಿ ಸಂಸ್ಥೆಗಳು.
  • ನಿಗಮ ಮಂಡಳಿಗಳು.
  • ಸ್ಥಳೀಯ ಪೌರ ಸಂಸ್ಥೆಗಳು.
  • ಸರಕಾರದಿಂದ ಹಣಕಾಸಿನ ನೆರವನ್ನ ಪಡೆಯುವ ಸಂಸ್ಥೆಗಳು.
  • ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮತ್ತು ನಾಯಕರು.
  • ಪ್ರಕರಣ ದಾಖಲು. ರಾಜ್ಯ ಚುನಾವಣಾ ಆಯೋಗ ಜಾರಿಗೆ ತಂದಿರುವ ನೀತಿ ಸಮ್ಮಿತೆಯನ್ನು ಯಾವುದೇ ರಾಜಕೀಯ ಪಕ್ಷ ರಾಜಕೀಯ ವ್ಯಕ್ತಿ ಅಥವಾ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಉಲ್ಲಂಘನೆಯನ್ನು ಮಾಡಿದರೆ ಅಂತಹ ವ್ಯಕ್ತಿಗಳ ವಿರುದ್ಧ ಅಥವಾ ಪಕ್ಷಗಳ ವಿರುದ್ಧ ರಾಜ್ಯ ಚುನಾವಣಾ ಆಯೋಗ ತತಕ್ಷಣವೇ ಪ್ರಕರಣವನ್ನು ದಾಖಲಿಸಿಕೊಳ್ಳುತ್ತದೆ. ದಾಖಲಿಸಿಕೊಂಡ ಪ್ರಕರಣಗಳನ್ನು ರಾಜ್ಯ ಚುನಾವಣಾ ಆಯೋಗವೇ ವಿಚಾರಿಸಿ ಪರಿಹರಿಸುತ್ತದೆ. ರಾಜ್ಯ ಚುನಾವಣಾ ಆಯೋಗ ಅಕ್ರಮಗಳನ್ನು ತಡೆಯುವುದಕ್ಕಾಗಿ squid ಕಮಿಟಿಯನ್ನು ರಚಿಸಿರುತ್ತದೆ. ಈ ಕಮಿಟಿಯು ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪ್ರಯತ್ನವನ್ನು ಮಾಡುತ್ತಿರುತ್ತದೆ. ಒಟ್ಟಾರೆಯಾಗಿ ಉತ್ತಮ ಮತ್ತು ಸರಳ ಚುನಾವಣೆಯನ್ನು ನಡೆಸುವುದಕ್ಕಾಗಿ ರಾಜ್ಯ ಚುನಾವಣಾ ಆಯೋಗ ಕೇಂದ್ರ ಚುನಾವಣಾ ಆಯೋಗದ ಶಿಫಾರಸ್ಸಿನಲ್ಲಿ ನೀತಿ ಸಂಹಿತೆಯನ್ನು ಜಾರಿಗೆ ತಂದಿರುತ್ತವೆ. ಹನುಮೇಶ ಅಗಳಕೇರಿ.ರಾಜ್ಯಶಾಸ್ತ್ರ ಉಪನ್ಯಾಸಕರು</code></pre>ಗವಿಸಿದ್ದೇಶ್ವರ ಪದವಿಪೂರ್ವ ಕಾಲೇಜ್ ಕೊಪ್ಪಳ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ